ಇಂದು ಬೆಂಗಳೂರು, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು ಈ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. 

ಇದನ್ನೂ ಓದಿ: ರಾಜ್ಯದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮೆಣಸೆ ಶಾಲೆಯ ಮುಖ್ಯ ಶಿಕ್ಷಕ ಡಾ. B.R ಗಂಗಾಧರಪ್ಪ

ಕರಾವಳಿ, ಮಲೆನಾಡು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 6ರವರೆಗೆ ಸಾಧಾರಣದಿಂದ ಭಾರೀ ಮಳೆಯಾಗಲಿದೆ. ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮಂಗಳವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.


ಇಂದು ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದರೆ, ಇಂದಿನಿಂದ 4 ದಿನ ಬೀದರ್‌, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇಂದು ಮಲೆನಾಡಿನ ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಗೆ ಹಳದಿ ಅಲರ್ಟ್‌ ನೀಡಲಾಗಿದೆ. ಭಾನುವಾರದಿಂದ ಸೋಮವಾರ ಬೆಳಗ್ಗೆ 8.30ರವರೆಗೆ ಕರಾವಳಿ, ಮಲೆನಾಡು ಜಿಲ್ಲೆಗಳ ಜೊತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಅಪ್ಪಳಿಸಲಿದೆ ಎಂದು ಇಲಾಖೆ ತಿಳಿಸಿದೆ.

ಕಳೆದ 10 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಂಗಳೂರಿನ ಬಹುತೇಕ ಏರಿಯಾಗಳು ಕೆರೆಯಂತಾಗಿವೆ, ರಸ್ತೆಗಳೆಲ್ಲ ನದಿಯಂತಾಗಿವೆ. ಮಲೆನಾಡು ಭಾಗದಲ್ಲಿ ಕೆಲವೇ ಘಂಟೆಗಳು ಸುರಿದ ಮಳೆಯು ದಾಖಲೆಯೊಂದಿಗೆ ತೀವ್ರತರಹದ ನಷ್ಟವನ್ನು ಕೃಷಿಕರಿಗೆ ಎದುರು ಮಾಡಿದೆ.