ಹಾಸನ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಸ್ಫೋಟಕಗಳನ್ನು ಶೇಖರಣೆ ಮಾಡಲಾಗಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಹಾಸನದ ಚನ್ನರಾಯಪಟ್ಟಣದ ಮನೆಯಲ್ಲಿ ಸ್ಫೋಟಕ ಪತ್ತೆಯಾಗಿದ್ದು, ಸ್ಪೋಟಕ ನಿರ್ಬಂಧಕ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದರು.
ಇದನ್ನೂ ಓದಿ: ಕಳಸ: ಮೀನು ಹಿಡಿಯಲು ತೆರಳಿದ್ದ ಯುವಕ ನೀರುಪಾಲು
ಈ ಕುರಿತಾಗಿ ಮಾಹಿತಿ ನೀಡಿದ ಅವರು ಅಕ್ರಮವಾಗಿ ಸಂಗ್ರಹ ಮಾಡಿದ್ದ ಸ್ಫೋಟಕಕ್ಕೆ ಬಳಸುವ ಅರ್ಧ ಕೆ.ಜಿ.ಸಲ್ಫರ್ ಪೌಡರ್, 2 ಕೆ.ಜಿ.ದಾರ, ಒಂದು ಕೆ.ಜಿ. ಹಸಿ ನೂಲು, ಖಾಲಿ ಕೊಳವೆ ನ್ಯೂಸ್ ಪೇಪರ್ 100, ಪಟಾಕಿ ಬತ್ತಿ 50 ಸೇರಿದಂತೆ 14 ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ನಯಾಜ್ ಮತ್ತು ಮುಜಾಯಿದ್ದಿನ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದರು.
ಪಟಾಕಿ ತಯಾರಿಗೋ ಅಥವಾ ಬೇರೆ ಉದ್ದೇಶಕ್ಕೆ ಸ್ಫೋಟಕ ಸಂಗ್ರಹಿಸಿದ್ದಾರೆ ಎಂಬ ಕುರಿತಾಗಿ ಮಾಹಿತಿಯನ್ನು ಕಲೆಹಾಕಲಾಗುತ್ತಿದ್ದು ಸಂಪೂರ್ಣ ವಿಚಾರಣೆಯ ನಂತರದಲ್ಲಿ ಈ ಕುರಿತಾದ ಹೆಚ್ಚಿನ ಮಾಹಿತಿಗಳು ದೊರೆಯಲಿದೆ.
ಮೂಡಿಗೆರೆ: ಕಳ್ಳಭಟ್ಟಿ ತಯಾರಿಕಾ ಅಡ್ಡೆಮೇಲೆ ದಾಳಿ; ಆರೋಪಿ ಸಹಿತ ಕಳ್ಳಭಟ್ಟಿ ವಶಕ್ಕೆ ಪಡೆದ ಪೊಲೀಸರು
ಅಕ್ರಮ ಕಳ್ಳಭಟ್ಟಿ ತಯಾರಿಕಾ ಅಡ್ಡೆಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯ ಸಹಿತ ಅಪಾರ ಪ್ರಮಾಣದ ಬೆಲ್ಲದಕೊಳೆ ಹಾಗೂ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಮಲೆಮನೆ ಎಂಬಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಖಚಿತ ಮಾಹಿತಿಯನ್ನು ಆಧರಿಸಿದ ಬಾಳೂರು ಠಾಣೆಯ ಪೊಲೀಸರು ಮಲೆಮನೆ ಸುರೇಶ ಎಂಬಾತನನ್ನು ಬಂಧಿಸಿ ಆತನ ಬಳಿ ಇದ್ದ 200 ಲೀಟರ್ ಬೆಲ್ಲದ ಕೊಳೆ ಹಾಗೂ ಎರಡು ಲೀಟರ್ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಭಾಗದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅನೇಕ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದು, ಈ ವ್ಯಾಪ್ತಿಯಲ್ಲಿ ಎಗಿಲ್ಲದೇ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ
ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಬ್ಇನ್ ಸ್ಪೆಕ್ಟರ್ ಸಿ.ಸಿ.ಪವನ್ ಕುಮಾರ್, ಸಿಬ್ಬಂದಿಗಳಾದ ರಾಜೇಂದ್ರ, ಜಾಫರ್, ಅಭಿಲಾಷ್, ಪ್ರದೀಪ್, ವಸಂತ್, ಸತೀಶ್ ಭಾಗವಹಿಸಿದ್ದರು.








0 Comments