ಹಾಸನ: (ನ್ಯೂಸ್ ಮಲ್ನಾಡ್ ವರದಿ) ಹಾಸನದಲ್ಲಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರನ್ನು ಆತಂಕಕ್ಕೆ ದೂಡಿದೆ.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ SDPI ಹಾಗೂ CFI ಜಿಲ್ಲಾಧ್ಯಕ್ಷರನ್ನು ವಶಕ್ಕೆ ಪಡೆದ ಪೊಲೀಸರು
ಹಾಸನದ ಕಿತ್ತಗಳಲೆ ಬಳಿಯಲ್ಲಿ ಎರಡು ಆನೆಗಳು ಪ್ರತ್ಯಕ್ಷವಾಗಿದ್ದು, ಒಂದೆಡೆ ಪ್ರಾಣಭೀತಿ ಜನರಲ್ಲಿ ಎದುರಾಗಿದ್ದರೆ, ಇತ್ತ ಬೆಳೆಹಾನಿ ಸಂಭವಿಸುವ ಸಾಧ್ಯತೆಗಳೂ ರೈತರಲ್ಲಿ ತಲೆದೋರಿದೆ.
ಇಲ್ಲಿನ ಕಾಫಿ ತೋಟದಲ್ಲಿ ಆನೆಗಳು ತಿರುಗುತ್ತಿದ್ದು ಸ್ಥಳೀಯರಲ್ಲಿ ಅತೀವ ಆತಂಕ ಎದುರಾಗಿದೆ. ಮಲೆನಾಡು ಭಾಗದಲ್ಲಿ ಕಳೆದ ಅನೇಕ ವರ್ಷಗಳಿಂದ ಕಾಡಾನೆಗಳ ದಾಂಧಲೆ, ಉಪಟಳ ನಡೆಯುತ್ತಲೇ ಇದ್ದು ಅನೇಕ ಕೃಷಿಕರು ತಾವು ಬೆಳೆದ ಬೆಳೆಯನ್ನು ಕಳೆದು ಕೊಂಡಿದ್ದರೆ ಇನ್ನೂ ಅನೇಕ ಕೃಷಿ ಕಾರ್ಮಿಕರು, ಮಾಲೀಕರು ತಮ್ಮ ಜೀವವನ್ನೇ ಆನೆ ದಾಳಿಯಿಂದ ಕಳೆದುಕೊಂಡಿದ್ದಾರೆ.
ಆನೆ ಬಂದಿರುವ ಸುದ್ದಿ ತಿಳಿದು ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮನೆಗೆ ಹಿಂದಿರುಗಿದ್ದಾರೆ. ಸುದ್ದಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಪುಂಡಾನೆಗಳನ್ನು ಮರಳಿ ಕಾಡಿಗೆ ಅಟ್ಟುವ ಸಲುವಾಗಿ ಪ್ರಯತ್ನ ನಡೆಸುತ್ತಿದ್ದಾರೆ.
ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 7 ಜನರ ಬಂಧನ; ಇಬ್ಬರು ಎಸ್ಕೇಪ್ :
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳ ಸಹಿತ ನಗದನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ನಗರದಕೋಟೆಯ ಮೂರುಮನೆ ಹಳ್ಳಿಯಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಚಿಕ್ಕಮಗಳೂರು ಪೊಲೀಸರು 7 ಜನ ಆರೋಪಿಗಳು ಮತ್ತು 33,430 ರೂಪಾಯಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು ಒಂಭತ್ತು ಜನ ಆರೋಪಿಗಳು ಜೂಜಾಟದಲ್ಲಿ ತೊಡಗಿದ್ದು ದಾಳಿಯ ವೇಳೆ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.
ಬಂಧಿತರನ್ನು ಸಿ.ಎನ್ ಚಂದ್ರಶೇಖರ್, ಸಿ.ಎಂ ವಿನಯ್ ಕುಮಾರ್, ಸಿ.ಎಸ್ ಹರೀಶ, ಅಶ್ವಥ್, ರಾಕೇಶ್, ರಕ್ಷಿತ್, ರಂಜಿತ್ ಕುಮಾರ್, ಕೆ.ಪಿ ನಟರಾಜ್ ಎಂದು ಗುರುತಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಚಿಕ್ಕಮಗಳೂರು ನಗರದ ಪಿ.ಎಸ್.ಐ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳು ನಡೆಸಿದ್ದಾರೆ.








0 Comments