ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಅಂಗನವಾಡಿ ಕೇಂದ್ರದಿಂದ ಮಕ್ಕಳಿಗೆ ನೀಡುವ ಬೇಳೆಕಾಳು, ಅಕ್ಕಿ, ಅಡುಗೆ ಎಣ್ಣೆ ಮುಂತಾದವುಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ: ತೀರ್ಥಹಳ್ಳಿ ಜೇನಿನಿಂದ ಕಚ್ಚಿಸಿಕೊಂಡು ಮುಖ ಮುಚ್ಚಿಕೊಂಡ ಭಾಗಮಂಡಲದ ಭ್ರಷ್ಟಾಚಾರಿಗಳು
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುರುವಳ್ಳಿ ಅಂಗನವಾಡಿ ಕೇಂದ್ರದ ಬೀಗ ಒಡೆದು ಕಳ್ಳತನ ನಡೆಸಿರುವ ಕಳ್ಳರು 50 ಕೆ.ಜಿ ಅಕ್ಕಿ, 8ಕೆ.ಜಿ ಸಕ್ಕರೆ, ಒಂದು ಕೆ.ಜಿ ಶೇಂಗಾ ಬೀಜ, ಅಡುಗೆ ಎಣ್ಣೆ ಕದ್ದು ಕಳ್ಳರು ಪರಾರಿಯಾಗಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಬಂದು ನೋಡಿದಾಗ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದ್ದು ಘಟನಾ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





0 Comments