ಹಾಸನ: (ನ್ಯೂಸ್ ಮಲ್ನಾಡ್ ವರದಿ) ಗಣಪತಿ ವಿಸರ್ಜನೆ ವೇಳೆ ವ್ಯಕ್ತಿಯೊಬ್ಬ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಸಕಲೇಶಪುರ ತಾಲೂಕಿನ ಗಣೇಶ ವಿಸರ್ಜನೆಯ ವೇಳೆ ಈ ದುರಂತ ಸಂಭವಿಸಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ವ್ಯಕ್ತಿಯನ್ನು ಯತೀಶ್ (55) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಗಣೇಶಮೂರ್ತಿ ವಿಸರ್ಜನೆ ವೇಳೆ ಯತೀಶ್ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ಯತೀಶ್ ಶವಕ್ಕಾಗಿ ಅಗ್ನಿಶಾಮಕ ದಳದಿಂದ ಶೋಧಕಾರ್ಯ ನಡೆಯುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಗಣಪತಿ ವಿಸರ್ಜನೆ ಹಾಗೂ ಮೆರವಣಿಗೆಯನ್ನು ಮಾಡಬೇಕೆಂದು ಎಲ್ಲಾ ಸಾರ್ವಜನಿಕ ಮಂಡಳಿಗಳಿಗೆ ಅಧಿಕಾರಿಗಳು ಮತ್ತೊಮ್ಮೆ ಸೂಚನೆ ನೀಡಿದ್ದಾರೆ.