ಮೂಡಿಗೆರೆ/ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಐಟಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉದ್ಯೋಗಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಬೆಂಗಳೂರಿನ ನೆಲಮಂಗಲದ ಬೈರನಾಯಕನಹಳ್ಳಿ ಬಳಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಸಮೀಪದ ಸಂಸೆ ಮೂಲದ ಐಟಿ ಉದ್ಯೋಗಿ ಟಿ.ಸಾಗರ್ ಎಂದು ಗುರುತಿಸಲಾಗಿದೆ.
ಬೈರನಾಯಕಹಳ್ಳಿ ರೈಲು ಹಳಿ ಬಳಿ ಸಾಗರ್ ಬೈಕ್ ಪತ್ತೆಯಾಗಿದ್ದು, ರೈಲುಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.
ಮೃತ ಸಾಗರ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಈ ಬಗ್ಗೆ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸಂಬಂಧ ಹೆಚ್ಚಿನ ಮಾಹಿತಿ ಪೊಲೀಸರ ಸಂಪೂರ್ಣ ತನಿಖೆಯ ನಂತರವಷ್ಟೇ ಹೊರಬೀಳಲಿದೆ. ಘಟನಾ ಸಂಬಂಧ ಪೋಷಕರು ಹಾಗೂ ಸ್ನೇಹಿತರು ಸಂತಾಪ ಸೂಚಿಸಿದ್ದಾರೆ.




0 Comments