ಹಾಸನ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಕರುಗಳ ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:ಪ್ರಶಮನೀ ಆಸ್ಪತ್ರೆಯ ಡಾ. ಉದಯಶಂಕರ್ ಸೇರಿದಂತೆ ಸಾಧಕರಿಗೆ ಅನುಗ್ರಹ ಪೂರ್ವಕ ಸನ್ಮಾನ

ಹಾಸನದ ಚನ್ನರಾಯಪಟ್ಟಣದ ಬಳಿ ಅಕ್ರಮವಾಗಿ ಹಸುವಿನ ಕರುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ವಾಹನ ಸಮೇತ 8 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.


ರಾತ್ರಿ 8 ಗಂಟೆಯ ಸಮಯದಲ್ಲಿ ಹಿರೀಸಾವೆ ಪಿಎಸ್‌ಐ ಸುಬ್ಬಯ್ಯ ಅವರು, ಬ್ಯಾಡರಹಳ್ಳಿ ಗೇಟ್ ಹತ್ತಿರ ವಾಹನ ತಪಾಸಣೆ ನಡೆಸುತ್ತಿದ್ದಾಗ ಚನ್ನರಾಯಪಟ್ಟಣ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ವಾಹನ ತಡೆದು ತಪಾಸಣೆ ಮಾಡಿದ್ದಾರೆ, ಈ ವೇಳೆ 8  ಹಸುವಿನ ಕರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಕೊಂಡು ಹೋಗುತ್ತಿದ್ದುದು ಕಂಡು ಬಂದಿದ್ದು, ಕೂಡಲೇ ಜಾನುವಾರವಿನ ಅಕ್ರಮ ಸಾಗಣೆಯಲ್ಲಿ ತೊಡಗಿದ್ದ ಚಾಲಕ ಸಜ್ಜಾದ್, ದನದ ವ್ಯಾಪಾರಿ ಮಾಗಡಿ ತಾಲೂಕಿನ ಅಹಮದ್ ಪಾಷ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನಾ ಸಂಬಂಧ ಹಿರೀಸಾವೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಈ ಸಂಬಂಧ ತನಿಖೆ ಮುಂದುವರೆದಿದೆ. ಅಕ್ರಮವಾಗಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ದ ಕಾನೂನಿನ ಅಡಿಯಲ್ಲಿ ಕಠಿಣವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.