ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ಭಾಗದ ಜನರ ಬಹುಬೇಡಿಕೆ ಹಾಗೂ ಈ ಭಾಗದ ಜನರಿಗೆ ಅಗತ್ಯತೆಯಿರುವ 100 ಬೆಡ್ ಸುಸಜ್ಜಿತ ಆಸ್ಪತ್ರೆ ಪ್ರಸ್ತಾವನೆ ನೆನೆಗುದಿಗೆ ಬಿದ್ದಿದ್ದು ಹಲವು ತೊಡಕುಗಳಿಂದ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಕುರಿತು ಸರ್ಕಾರವನ್ನು ಎಚ್ಚರಿಸುವಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡ ಅವರು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶೃಂಗೇರಿಯಲ್ಲಿ ಮಲೆನಾಡಿನ ಜನರಿಗೆ ಪೂರಕವಾಗಿ ಅಗತ್ಯವಿರುವ ನೂರು ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಈ ಕುರಿತು ಎದುರಾಗಿರುವ ಎಲ್ಲಾ ಸಮಸ್ಯೆಗಳನ್ನು ನಿವಾರಿಸಿ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿಡಿ ರಾಜೇಗೌಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಸಲ್ಲಿಸಿದರು.
ವರ್ಷಕ್ಕೆ 40 ಲಕ್ಷಕ್ಕೂ ಅಧಿಕ ಪ್ರವಾಸಿಗರು ಶೃಂಗೇರಿಗೆ ಭೇಟಿ ನೀಡುತ್ತಿದ್ದು, ಈ ಭಾಗದಲ್ಲಿ 10,000 ಕ್ಕೂ ಅಧಿಕ ಜನರು ವಾಸ ಮಾಡುತ್ತಿದ್ದು, ಈಗಿರುವ ತಾಲೂಕು ಆಸ್ಪತ್ರೆ ಅತಿ ಆಧುನಿಕ ಸಲಕರಣೆಗಳನ್ನು ಹಾಗೂ ಸುಸಜ್ಜಿತ ಸೌಲಭ್ಯಗಳನ್ನು ಹೊಂದಿಲ್ಲದೇ ಇರುವುದರಿಂದ, ತುರ್ತು ಸಂದರ್ಭಗಳಲ್ಲಿ ಜನರು ಮಣಿಪಾಲ ಅಥವಾ ಶಿವಮೊಗ್ಗದ ಆಸ್ಪತ್ರೆಗಳಿಗೆ ತೆರಳಬೇಕಾಗಿರುವುದರಿಂದ ಈ ಅವಧಿಯಲ್ಲಿ ಅನೇಕರು ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿರುವ ನಿದರ್ಶನಗಳಿದ್ದು ಈ ಎಲ್ಲಾ ವಿಷಯವನ್ನು ಸರ್ಕಾರಕ್ಕೆ ಮನದಟ್ಟು ಮಾಡಿ ತ್ವರಿತಗತಿಯಲ್ಲಿ ನೆನೆಗುದಿಗೆ ಬಿದ್ದಿರುವ ಆಸ್ಪತ್ರೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಮನವಿ ಸಲ್ಲಿಸಿದರು.
2007 ನೇ ಸಾಲಿನಲ್ಲಿ ಶೃಂಗೇರಿಯ ತಾಲೂಕು ಆಸ್ಪತ್ರೆಯನ್ನು 100 ಬೆಡ್ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಸರ್ಕಾರ ಆದೇಶಿಸಿದ್ದರೂ ಆಸ್ಪತ್ರೆ ಕಾರ್ಯ ಸಾಧ್ಯವಾಗಲಿಲ್ಲ ಎಂದು ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ ಸದಸ್ಯರಾದ ಅನಿಲ್ ಮಲ್ನಾಡ್, ಹಾಗೂ ಕಾಫಿ ಗಿರಿ ಇದ್ದರು.





0 Comments