ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ನಾಳೆ ಕೊಪ್ಪದಲ್ಲಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಆಯೋಜನೆಗೊಂಡಿದೆ. 

ಇದನ್ನೂ ಓದಿ: ಅಮಾನವೀಯ ರೀತಿಯಲ್ಲಿ ಜಾನುವಾರುಗಳ ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳು ಸೆರೆ; ಎಂಟು ಕರುಗಳ ರಕ್ಷಣೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕೊಪ್ಪ ಪ್ರಖಂಡ ಇವರ ವತಿಯಿಂದ ಜಿಲ್ಲಾ ಮಟ್ಟದ ಮೊಸರು ಕುಡಿಕೆ ಕಾರ್ಯಕ್ರಮ ಕೊಪ್ಪದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ದಿನಾಂಕ 11.09.2022 ರ ಭಾನುವಾರದಂದು ಆಯೋಜನೆಗೊಂಡಿದೆ.


ನಾಳೆ ಬೆಳಗ್ಗೆ 09.30 ರಿಂದ ಆರಂಭವಾಗುವ ಈ ಜಿಲ್ಲಾ ಮಟ್ಟದ ಮೊಸರು ಕುಡಿಕೆ ಒಡೆಯುವ ಸ್ಪರ್ಧೆಗೆ ಈಗಾಗಲೇ ಅನೇಕ ತಂಡಗಳು ನೋಂದಣಿ ಮಾಡಿಕೊಂಡಿದ್ದು ಪ್ರಮುಖ ಆಕರ್ಷಣೆಯಾಗಿ ಡಿಜೆ ವ್ಯವಸ್ಥೆ ಸಹ ಇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ವಿಜೇತ ತಂಡವು 22,222 ರೂಪಾಯಿಗಳ ಆಕರ್ಷಕ ನಗದನ್ನು ತನ್ನದಾಗಿಸಿಕೊಳ್ಳಲಿದೆ.

ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಸಂಘಟಕರು ಕೋರಿದ್ದಾರೆ.