ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದ್ವಿಚಕ್ರ ವಾಹನವನ್ನು ಅಜಾಗರೂಕತೆಯಿಂದ ವೀಲಿಂಗ್ ಮಾಡಿಕೊಂಡು ಅಪಾಯಕಾರಿಯಾಗಿ ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಚಿಕ್ಕಮಗಳೂರು ನಗರದ ಎಐಟಿ ವೃತ್ತದ ಬಳಿಯಲ್ಲಿ ಅಜಾಗರೂಕತೆಯಿಂದ, ಬೈಕ್ ವೀಲಿಂಗ್ ಮಾಡಿಕೊಂಡು ಅಪಾಯಕಾರಿ ರೀತಿಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಚಿಕ್ಕಮಗಳೂರು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ನೂರು ಬೆಡ್ ಸುಸಜ್ಜಿತ ಆಸ್ಪತ್ರೆ ಪ್ರಕ್ರಿಯೆಯ ತೊಡಕನ್ನು ನಿವಾರಿಸಲು ಸರ್ಕಾರವನ್ನು ಎಚ್ಚರಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಮನವಿ


ಸುಜುಕಿ ಬೈಕನ್ನು ಚಾಲಕನ ಸಮೇತ ವಶಕ್ಕೆ ಪಡೆದಿರುವ ಪೊಲೀಸರು ಆತನ ವಿರುದ್ಧ ಚಿಕ್ಕಮಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮಕ್ಕೆ ಸೂಚಿಸಿದ್ದಾರೆ. 

ಈ ರೀತಿಯಾದ ಚಟುವಟಿಕೆಗಳು ವೀಲಿಂಗ್ ನಡೆಸುವ ವ್ಯಕ್ತಿ ಸೇರಿದಂತೆ, ರಸ್ತೆಯಲ್ಲಿ ಸಂಚಾರ ನಡೆಸುವ ಇತರ ವಾಹನ ಸವಾರರಿಗೂ ಅಪಾಯ, ತೊಂದರೆ ಮಾಡುವ ರೀತಿಯದ್ದಾಗಿದ್ದು, ಇಂತಹ ಚಟುವಟಿಕೆಗಳ ಮೇಲೆ ನಿಗಾವಹಿಸಿರುವ ಪೊಲೀಸರು ಈ ರೀತಿಯ ಅಪಾಯಕಾರಿ ಕೃತ್ಯಗಳಲ್ಲಿ ಯಾರೂ ಭಾಗಿಯಾಗದಂತೆ ಎಚ್ಚರಿಸಿದ್ದಾರೆ.

ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಯಾರಾದರೂ ಇಂತಹ ಅಪಾಯಕಾರಿ ಚಾಲನೆಯಲ್ಲಿ ಯಾರಾದರೂ ತೊಡಗಿರುವುದು ಕಂಡುಬಂದಲ್ಲಿ ಹತ್ತಿರದ ಠಾಣೆಗಳ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.