ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶೃಂಗೇರಿಯಲ್ಲಿ ಜಿಲ್ಲಾ ಮಟ್ಟದ ಮೊಸರು ಕುಡಿಕೆ ಕಾರ್ಯಕ್ರಮವನ್ನು ಶ್ರೀ ರಾಮ ಸೇನೆ ಶೃಂಗೇರಿ ಘಟಕವು ಆಯೋಜನೆ ಮಾಡಿದೆ. 

ಇದನ್ನೂ ಓದಿ: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಎರಡು ದಿನಗಳ ಕಾಲ ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸೆಪ್ಟೆಂಬರ್ 17 ರ ಶನಿವಾರದಂದು ಮಧ್ಯಾಹ್ನ 02 ಗಂಟೆಗೆ ಶೃಂಗೇರಿ ಪಟ್ಟಣ ಪಂಚಾಯತ್ ನ ಮುಂಭಾಗದಲ್ಲಿರುವ ಗುರುಸೇವಾ ಧುರೀಣ ಪದ್ಮಶ್ರೀ ಪುರಸ್ಕೃತ ಡಾ. ಬಿ.ಆರ್ ಗೌರೀಶಂಕರ್ ಸಭಾಂಗಣದಲ್ಲಿ ಶ್ರೀ ರಾಮ ಸೇನೆ ಶೃಂಗೇರಿ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಮೊಸರು ಕುಡಿಕೆ ಒಡೆಯುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. 


ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ಹಿಂದೂ ಫೈರ್ ಬ್ರಾಂಡ್ ನಾಯಕ, ಶ್ರೀ ರಾಮ ಸೇನೆಯ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ಅವರು ಮಾತನಾಡಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಹರೀಶ್ ವಿ.ಶೆಟ್ಟಿ ವಹಿಸಿಕೊಂಡಿದ್ದು ಕಾರ್ಯಕ್ರಮವನ್ನು ಶ್ರೀ ರಾಮ ಸೇನೆ ಶೃಂಗೇರಿ ಘಟಕ ಆಯೋಜನೆ ಮಾಡಿದೆ. 

ಮೊಸರು ಕುಡಿಕೆ ಒಡೆಯುವ ತಂಡಕ್ಕೆ 22,222 ರೂಪಾಯಿಗಳ ನಗದು ಬಹುಮಾನ ದೊರೆಯಲಿದ್ದು, ಕಾರ್ಯಕ್ರಮ ಆರಂಭದ ಮೊದಲು ಶೃಂಗೇರಿಯ ಶಂಕರಾಚಾರ್ಯ ವೃತ್ತದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್ ಜಾಥಾ ನಡೆಯಲಿದೆ. ಈ ಜಾಥಾದಲ್ಲಿ ಶ್ರೀ ರಾಮ ಸೇನೆ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ಅವರು ಭಾಗಿಯಾಗಲಿದ್ದಾರೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಶ್ರೀ ರಾಮ ಸೇನೆಯ ಪದಾಧಿಕಾರಿಗಳು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಈ ನಂಬರನ್ನು ಸಂಪರ್ಕಿಸಬಹುದು: 8861791333