ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗೋಮಾಂಸವನ್ನು ಶೇಖರಣೆ ಮಾಡಲಾಗಿದ್ದ ಮನೆಗೆ ಪೊಲೀಸರು ದಾಳಿ ಮಾಡಿ ಅಪಾರ ಪ್ರಮಾಣದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಕೋಪದ ಕೈಗೆ ಬುದ್ದಿ ನೀಡಿ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಪತ್ನಿಯ ಕುತ್ತಿಗೆಯನ್ನು ಸೀಳಿ ಕೊಂದ ಪತಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿಪುರ ಷರೀಫ್ ಮನೆಗೆ ದಾಳಿ ನಡೆಸಿದ ಪೊಲೀಸರು, ಮನೆಯಲ್ಲಿ ಅಕ್ರಮವಾಗಿ ಶೇಖರಣೆ ಮಾಡಲಾಗಿದ್ದ ಸುಮಾರು 76 ಕೆ.ಜಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. 


ಈ ಕಾರ್ಯಾಚರಣೆಯು ಜಯಪುರ ಪೊಲೀಸ್ ಠಾಣೆಯ ಪಿಎಸೈ ಜ್ಯೋತಿ ಹಾಗೂ ಎಎಸೈ ನಿಂಗೇಗೌಡ ಅವರ ತಂಡ ನಡೆಸಿದ್ದು ಪೊಲೀಸರು ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ. 

ಆರೋಪಿಯನ್ನು ಬಂಧಿಸಿ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು, ಜಯಪುರ ಠಾಣೆಯ ಪೊಲೀಸ್ ಅಧಿಕಾರಿಗಳನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೋರಿದ್ದಾರೆ.