ಚಿಕ್ಕಮಗಳೂರು: ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಕೆಲವರು ಸಣ್ಣ ಪುಟ್ಟ ಗಾಯಗಳಿಗೆ ತುತ್ತಾಗಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಸಂಭವಿಸಿದೆ.
ಇದನ್ನೂ ಓದಿ: ಮೂಡಿಗೆರೆ: ಪ್ರಸಿದ್ಧ ಚಾರಣ ಸ್ಥಳ ಎತ್ತಿನ ಭುಜಕ್ಕೆ ತಾತ್ಕಾಲಿಕವಾಗಿ ಪ್ರವೇಶ ನಿಷೇಧ
ಚಿಕ್ಕಮಗಳೂರು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿರುವ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಬಸ್ ಹಾಗು ಲಾರಿ ನಡುವೆ ಮುಖಾಮುಖಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬಸ್ ಕಂದಕಕ್ಕೆ ಜಾರಿದ್ದು, ಎರಡು ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಗೆ ತುತ್ತಾಗಿದ್ದು ಪ್ರಾಣಪಾಯಗಳಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಅಪಘಾತದಿಂದಾಗಿ ಕೆಲ ಗಂಟೆಗಳ ಕಾಲ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು.
ಬಣಕಲ್ ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಟ್ಟು ಬಿಡದೇ ಮಳೆಯಾಗುತ್ತಿದ್ದು ಮಳೆಯಿಂದಾಗಿ ಅನೇಕ ಅವಾಂತರಗಳು ಸೃಷ್ಟಿಯಾಗಿದೆ.
ಬೇರೆಡೆಯಿಂದ ಈ ಮಾರ್ಗದ ಮೂಲಕ ವಾಹನಗಳಲ್ಲಿ ಸಂಚಾರ ಮಾಡುವವರು ರಸ್ತೆ ನಿಯಮಗಳನ್ನು ಪಾಲಿಸಿಕೊಂಡು ನಿಧಾನಗತಿಯಲ್ಲಿ ವಾಹನ ಚಾಲನೆ ಮಾಡಿಕೊಂಡು ಸಾಗಬೇಕಿದೆ.
- ತನು ಕೊಟ್ಟಿಗೆಹಾರ, ವರದಿಗಾರರು





0 Comments