ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದೇಶ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿರುವ ಹಿನ್ನೆಲೆ ಹಾಗೂ ಅನೇಕ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹಿಂದೆ ಕೈವಾಡ ಹೊಂದಿರುವ ಶಂಕೆಯ ಹಿನ್ನೆಲೆ ಹಾಗೂ ಸಾಕ್ಷಾಧಾರಗಳು ದೊರೆತಿರುವ ಹಿನ್ನೆಲೆ ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ದೇಶದ್ರೋಹಿ ಸಂಘಟನೆ ಪಿಎಫ್ಐ ನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿತ್ತು.
ಈ ಬೆನ್ನಲ್ಲೇ ಪಿಎಫ್ ಐ ಹಾಗೂ ಎಸ್ ಡಿ ಪಿ ಐ ಕಚೇರಿಗಳ ಮೇಲೆ ಹಾಗೂ ಪ್ರಮುಖರ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ಸಂಗ್ರಹಿಸಿದ್ದರು ಹಾಗೂ ಶಂಕೆ ಇರುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಿಚಾರಣೆಗೆ ಕರೆದರೂ ಠಾಣೆಗೆ ಹಾಜರಾಗದ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ವಗಾರ್ ಮೂಲದ ಪಿಎಫ್ಐ ಸಂಘಟನೆಯ ಸಕ್ರಿಯ ಕಾರ್ಯಕರ್ತ ಆರೀಫ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸರ್ಚ್ ವಾರೆಂಟ್ ಹೊಂದಿರುವ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಮನೆಯ ಮೇಲೆ ದಾಳಿ ನಡೆಸಿ ಅಗತ್ಯ ಮಾಹಿತಿಗಳನ್ನು ಕಲೆಹಾಕಿದ್ದಾರೆ. ಎರಡು ದಿನಗಳ ಹಿಂದೆ ಪೊಲೀಸರು ಠಾಣೆಗೆ ಹಾಜರಾಗುವಂತೆ ಆರೀಫ್ ಗೆ ಪೊಲೀಸರು ಸೂಚಿಸಿದ್ದರು. ಸೂಚನೆಯನ್ನು ಪಾಲಿಸದ ಹಿನ್ನೆಲೆ ಅಧಿಕಾರಿಗಳೇ ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.
ಈ ದಾಳಿಯಲ್ಲಿ ದೂರು ಠಾಣೆಯ ಸಿಪಿಐ ಸತ್ಯನಾರಾಯಣ, ಪಿಎಸ್ಐ ಸಜಿತ್ ಕೀರ್ತಿ ಕುಮಾರ್ ಹಾಗೂ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು. ಅಂತಯೇ ಕಂದಾಯ ಇಲಾಖೆಯ ಅಧಿಕಾರಿಗಳು ಕೂಡ ಈ ಕಾರ್ಯಾಚರಣೆಗೆ ಸಾತ್ ನೀಡಿದ್ದಾರೆ.
ಪಿ ಎಫ್ ಐ ಬ್ಯಾನ್ ಆದೇಶದ ನಂತರದಲ್ಲಿ ರಾಜ್ಯದಲ್ಲಿರುವ ಪಿ ಎಫ್ ಐ ಕಛೇರಿಗಳಿಗೆ ಪೊಲೀಸರು ಬೀಗ ಹಾಕಿ ಈ ಸಂಘಟನೆಗಳ ಪ್ರಮುಖರನ್ನು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಅವರ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನ SDPI ಕಛೇರಿ ಮೇಲೂ ದಾಳಿ:
ಚಿಕ್ಕಮಗಳೂರಿನ ಮಲ್ಲಂದೂರು ರಸ್ತೆಯಲ್ಲಿರುವ SDPI PFI ಸಂಘಟನೆಗಳ ಕಛೇರಿಗಳ ಮೇಲೆ ಬಸವನಹಳ್ಳಿ ಪೊಲೀಸರು ದಾಳಿ ನಡೆಸಿದರು. SDPI ಜಿಲ್ಲಾಧ್ಯಕ್ಷ ಮುನೀರ್ ಹಾಗೂ ಪಿಎಫ್ಐ ಜಿಲ್ಲಾಧ್ಯಕ್ಷ ಚಾನ್ ಪಾಷಾ ಮನೆಯ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕಿದ್ದಾರೆ. ಒಟ್ಟಾರೆ ಈ ಎರಡೂ ಸಂಘಟನೆಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದು ಅಗತ್ಯ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.








0 Comments