ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ತಂತಿ ತಗುಲಿದ ಪರಿಣಾಮ ಎರಡು ಹಸುಗಳು ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಇದನ್ನೂ ಓದಿ: ಅಂಗಾಂಗ ದಾನ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ | ಪ್ರೇಮದ ವಿಚಾರಕ್ಕೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ

ಚಿಕ್ಕಮಗಳೂರಿನ ತೊಗರಿಹಂಕಲ್ ಸಮೀಪದ ಹಿರೇಬಿದರೆ ಬಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಈ ಗ್ರಾಮದ ಕೃಷಿಕ ರಮೇಶ್ ಎಂಬುವವರು ಬೆಳೆಗಳ ರಕ್ಷಣೆಯ ಸಲುವಾಗಿ ತಮ್ಮ ಜಮೀನಿನ ಸುತ್ತ ವಿದ್ಯುತ್ ತಂತಿಗಳನ್ನು ಅಳವಡಿಸಿದ್ದರು, ಆದರೆ ಈ ತಂತಿಗಳು ಅಕ್ರಮ ಎಂಬುದಾಗಿ ಆರೋಪಿಸಿರುವ ಹಸುವಿನ ವಾರಸುದಾರ ಗುರುಮೂರ್ತಿ, ಸೂಕ್ತ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.


ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಅವರು ಹಸುಗಳನ್ನು ಕಳೆದುಕೊಂಡಿರುವುದಕ್ಕೆ ಸೂಕ್ತವಾದ ಪರಿಹಾರವನ್ನು ನ್ಯಾಯವನ್ನು ಒದಗಿಸಬೇಕೆಂದು ಆಗ್ರಹಿಸಿದ್ದಾರೆ. ಘಟನಾ ಸಂಬಂಧ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.