ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಹಾಯಕ ಕೃಷಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್ ಕುಮಾರ್ ಅವರು ಇಂದು ನಿಧನರಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಳೆದ ಐದು ವರ್ಷಗಳಿಂದ ಸಹಾಯಕ ಕೃಷಿ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ 49 ವರ್ಷ ಪ್ರಾಯದ ವಿಜಯ್ ಕುಮಾರ್ ಅವರು ಇಂದು ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದಿದ್ದಾರೆ.


ಉಡುಪಿ ಜಿಲ್ಲೆಯ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ಸಂಜೆಯ ವೇಳೆಗೆ ನಿಧನ ಹೊಂದಿದ ಅವರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. 

ಮೃತರ ಅಕಾಲಿಕ ಮರಣದ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಸಂತಾಪವನ್ನು ಸೂಚಿಸಿದ್ದಾರೆ.