ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನ ವಿದ್ಯಾಭಾರತಿ ಆಂಗ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಇಂದು ಪ್ರತಿಭಾ ಕಾರಂಜಿ ಕಾರ್ಯಕ್ರಮ ಜರುಗಿತು. 

ಇದನ್ನೂ ಓದಿ: ಕೋಳಿ ಫಾರಂ ನಲ್ಲಿದ್ದ ದೈತ್ಯ ಹೆಬ್ಬಾವನ್ನು ಸೆರೆ ಹಿಡಿದ ಸ್ನೇಕ್ ಕಿರಣ್ | ಕೈಗೆ ಸುತ್ತಿಕೊಂಡು ಕೆಲಕಾಲ ಕಾಡಿದ ಹೆಬ್ಬಾವು

ಶಾಲಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಅದನ್ನು ಗುರುತಿಸುವ ಸಲುವಾಗಿ ನಡೆಯುವ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಕ್ಕಳು ಭಾಗವಹಿಸಿ ತಮ್ಮೊಳಗಿನ ಪ್ರತಿಭೆಯನ್ನು ಅನಾವರಣಗೊಳಿಸಿದರು. 


ಇಂದು ಚಿಕ್ಕಮಗಳೂರು ನಗರದ ಬಿಲ್ಡ್ ರಸ್ತೆಯಲ್ಲಿರುವ ವಿದ್ಯಾಭಾರತಿ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಮುಖ್ಯಸ್ಥರಾದ ಡಾ. ಅಪ್ಸರ್ ಅಹಮದ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ್ ಮಾಡುವುದರ ಮೂಲಕ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಆಹ್ವಾನಿತ ಗಣ್ಯರು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಾಗುತ್ತದೆ ಎಂದು ಹಾರೈಸಿದರು ಹಾಗೂ ಸೋಲು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕಾರ ಮಾಡುವಂತೆ ಕಿವಿಮಾತನ್ನು ಹೇಳಿದರು. 

ವಿದ್ಯಾರ್ಥಿಗಳು ಅತ್ಯಂತ ಆಸಕ್ತಿಯಿಂದ ಭಾಗಿಯಾಗಿದ್ದರೆ ತಮ್ಮ ಮಕ್ಕಳ ಪ್ರತಿಭೆಯನ್ನು ಸವಿಯುವ ಸಲುವಾಗಿ ಅನೇಕ ಸಂಖ್ಯೆಯಲ್ಲಿ ಪೋಷಕರು ಸಹ ಕಾರ್ಯಕ್ರಮದ ವೀಕ್ಷಣೆಯನ್ನು ಮಾಡಿದರು.