ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗೋಮಾಂಸ ಸಾಗಣೆ ನಡೆಸುತ್ತಿದ್ದ ಆರೋಪಿಗಳನ್ನು ಶೃಂಗೇರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಭಿಕ್ಷಾಟನೆಯಲ್ಲಿ ತೊಡಗಿದ್ದ ತಾಯಿ ಮಗುವನ್ನು ರಕ್ಷಿಸಿದ ಅಧಿಕಾರಿಗಳು
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿಯ ವೇಳೆಗೆ ಶೃಂಗೇರಿ ಹೊರವಲಯವಾದ ತೆಕ್ಕೂರು ಸರ್ಕಲ್ ಬಳಿ ಇಬ್ಬರು ಅಸ್ಸಾಂ ಮೂಲದ ಕಾರ್ಮಿಕರು ಅಕ್ರಮವಾಗಿ ಗೋಮಾಂಸ ಸಾಗಾಟ ನಡೆಸುತ್ತಿದ್ದ ಕುರಿತಾಗಿ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಹಿಡಿದಿದ್ದು, ಆರೋಪಿಗಳಿಂದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ತೆಕ್ಕೂರು, ಕಲ್ಕುಳಿ ಭಾಗದಲ್ಲಿ ಕಾಂಗ್ರೆಸ್ ನಾಯಕರ ತೋಟದ ಕೆಲಸಕ್ಕೆಂದು ಬರುವ ಅಸ್ಸಾಂ ಕಾರ್ಮಿಕರು ಅವ್ಯಾಹತವಾಗಿ ಗೋಹತ್ಯೆಯಲ್ಲಿ ತೊಡಗಿದ್ದಾರೆ. ಮಾಂಸ ಮಾರಾಟದ ಶಂಕೆ ಸಹ ಇದ್ದು ಇಂತಹ ಕೃತ್ಯಗಳನ್ನು ಎಸಗುವವರ ಮೇಲೆ ಗೋಹತ್ಯೆ ನಿಷೇಧ ಕಾಯ್ದೆಯ ಅಡಿಯಲ್ಲಿ ಸೂಕ್ತವಾದ ಕ್ರಮಗಳನ್ನು ಕೈಗೊಂಡು ಮಲೆನಾಡು ಭಾಗದಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರ ವಹಿಸಬೇಕು - ಹರೀಶ್ ವಿ ಶೆಟ್ಟಿ, ಹಿಂದೂ ಸಂಘಟನೆಗಳ ಮುಖಂಡರು.
ಈ ಕುರಿತಾಗಿ ಶೃಂಗೇರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ಕಠಿಣ ಶಿಕ್ಷೆ ವಿಧಿಸುವಂತೆ ಹಿಂದೂ ಸಂಘಟನೆಗಳ ಆಗ್ರಹ:
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕುರಿತಾದ ಕಾಯ್ದೆಗಳು ಜಾರಿಯಲ್ಲಿದ್ದರೂ ಇಂತಹ ಕೃತ್ಯಗಳು ಮಲೆನಾಡು ಭಾಗದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವುದನ್ನು ವಿರೋಧಿಸಿರುವ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು, ಆರೋಪಿಗಳಿಗೆ ನಿರ್ದಾಕ್ಷಿಣ್ಯ ಹಾಗೂ ಕಾನೂನಿನ ಅಡಿಯಲ್ಲಿ ಕಠಿಣವಾದ ಶಿಕ್ಷೆಯನ್ನು ವಿಧಿಸಿ ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳಬೇಕು ಎಂಬ ಆಗ್ರಹವನ್ನು ವ್ಯಕ್ತಪಡಿಸಿದೆ.
ಕಳೆದ ಕೆಲವು ದಿನಗಳ ಹಿಂದಷ್ಟೇ ಕೊಪ್ಪ ತಾಲೂಕಿನ ಜಯಪುರ ಠಾಣೆಯ ಪೊಲೀಸರು ಜಯಪುರ ವ್ಯಾಪ್ತಿಯ ಮನೆಯೊಂದರಲ್ಲಿದ್ದ ಅಪಾರ ಪ್ರಮಾಣದ ಗೋಮಾಂಸವನ್ನು ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಈ ರೀತಿಯಾದ ಘಟನೆಗಳು ಮಲೆನಾಡು ಭಾಗದಲ್ಲಿ ನಡೆಯುತ್ತಿರುವುದು ಜಾನುವಾರುಗಳನ್ನು ಸಾಕುವ ಕೃಷಿಕರನ್ನು ಆತಂಕಕ್ಕೆ ದೂಡಿದೆ.





0 Comments