ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಆನೆ ದಾಳಿಯಿಂದ ತೋಟದ ಕಾರ್ಮಿಕ ದಾರುಣವಾಗಿ ಮೃತಪಟ್ಟ ಘಟನೆ ಮೂಡಿಗೆರೆಯಲ್ಲಿ ಇಂದು ಸಂಭವಿಸಿದೆ.
ಇದನ್ನೂ ಓದಿ: ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತೋಟದ ಕಾರ್ಮಿಕ ಅರ್ಜುನ್ ಎಂಬಾತನನ್ನು ಆನೆ ತುಳಿದು ಸಾಯಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಭಾಗದಲ್ಲಿ ನಿರಂತರವಾಗಿ ಆನೆ ದಾಳಿ ಹಾಗೂ ಕಾಡು ಪ್ರಾಣಿಗಳು ಉಪಟಳ ನೀಡುತ್ತಿದ್ದು ಈ ಘಟನೆಯಿಂದಾಗಿ ಹೊಲ ಗದ್ದೆಗಳಲ್ಲಿ ಕೆಲಸ ಮಾಡುವ ಕೃಷಿಕರು ಹಾಗೂ ಸ್ಥಳೀಯರು ತೀವ್ರ ಆತಂಕಕ್ಕೆ ಸಿಲುಕಿದ್ದಾರೆ.
ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ. ಸುತ್ತಮುತ್ತಲಿನ ಗ್ರಾಮಸ್ಥರು, ಕೃಷಿಕರು ಭಯಕ್ಕೀಡಾಗಿದ್ದು, ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳ ಸ್ಥಿತಿ ಏನು ಎಂಬುದಾಗಿ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.





0 Comments