ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಯುವಕನೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ವರದಿಯಾಗಿದೆ.

ಇದನ್ನೂ ಓದಿ: ವಿದ್ಯುತ್ ತಂತಿತಗುಲಿ ಎರಡು ಹಸುಗಳ ದುರ್ಮರಣ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ನಲ್ಲಿ ಯುವಕ ನೇಣಿಗೆ ಶರಣಾಗಿದ್ದಾನೆ. 


ಆತ್ಮಹತ್ಯೆಗೆ ಶರಣಾಗಿರುವ ಯುವಕನನ್ನು ತುಮಕೂರು ಜಿಲ್ಲೆ ಕೆರೆಸೂರಗೊಂಡನ ಹಳ್ಳಿಯ ಮಂಜುನಾಥ್ (26) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಪೊಲೀಸರು ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. 

ತನ್ನ ಅಕ್ಕ ಸುಧಾಳನ್ನು ಕೊಲೆಗೈದಿದ್ದಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ ಎಂಬುದಾಗಿ ಕೇಳಿ ಬಂದಿದ್ದು, ಸುಧಾ ತನ್ನ ಗಂಡನನ್ನು ಅವಳ ಸ್ನೇಹಿತರ ಜತೆ ಸೇರಿ ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಳು. ಈ ಕೋಪದಲ್ಲಿ ಸುಧಾಳನ್ನು ಕೊಲೆ ಮಾಡಿದ್ದೇನೆ ಎಂದು ಡೆತ್ ನೋಟ್‌ನಲ್ಲಿ ಬರೆಯಲಾಗಿದೆ ಎನ್ನಲಾಗಿದೆ.

ಡೆತ್ ನೋಟ್ ವಶಕ್ಕೆ ಪಡೆದಿರುವ ಪೊಲೀಸರು ಮೃತನ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಘಟನಾ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.