ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಜಗನ್ನಾಥ್ ಅವರು ಅನಾರೋಗ್ಯದಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಗನ್ನಾಥ್ ಪೂಜಾರಿ (29) ಅವರು ಅನಾರೋಗ್ಯದಿಂದಾಗಿ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ಒಳಪಟ್ಟಿದ್ದರು. ಕಳೆದ ಒಂದು ವಾರದಿಂದ ಚಿಕಿತ್ಸೆಗೆ ಒಳಪಟ್ಟಿದ್ದ ಅವರು ಇಂದು ಮುಂಜಾನೆ 3:45ರ ಸುಮಾರಿಗೆ ವಿಧಿವಶರಾಗಿದ್ದಾರೆ.
ಇದನ್ನೂ ಓದಿ: ಅಕ್ರಮವಾಗಿ ಸಂಗ್ರಹಣೆ ಮಾಡಿದ್ದ ಸ್ಫೋಟಕಗಳು ಪತ್ತೆ; ಇಬ್ಬರು ಪೊಲೀಸರ ವಶಕ್ಕೆ
ಮೃತರ ಸಾವಿನ ಕುರಿತು ಸಹೋದ್ಯೋಗಿಗಳು ಹಾಗೂ ಶೃಂಗೇರಿ ಠಾಣೆಯ ಅಧಿಕಾರಿಗಳು ಬೇಸರವನ್ನು ವ್ಯಕ್ತಪಡಿಸಿದ್ದು, ಸಂತಾಪ ಸೂಚಿಸಿದ್ದಾರೆ.
ಮೃತ ಜಗನ್ನಾಥ್ ಪೂಜಾರಿ ಅವರು ಮೂಲತಃ ಬಿಜಾಪುರದವರಾಗಿದ್ದು, ಸಂಬಂಧಿಕರು ಪತ್ನಿ ಹಾಗೂ ಓರ್ವ ಹೆಣ್ಣುಮಗುವನ್ನು ಅಗಲಿದ್ದಾರೆ.
ಶೃಂಗೇರಿ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಶೃಂಗೇರಿಯ ಕಲ್ಕಟ್ಟೆ ನಿವಾಸಿ ನಾರಾಯಣಮೂರ್ತಿಯವರು ನಿನ್ನೆ ರಾತ್ರಿಯ ವೇಳೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಾರಾಯಣ ಮೂರ್ತಿ ಅವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಕಾರಣಗಳೇನು ಎಂಬುದು ತಿಳಿದು ಬಂದಿಲ್ಲ.
ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ. ಸಾವಿನ ಕುರಿತು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಘಟನಾ ಸಂಬಂಧ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








0 Comments