ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಗಣಪತಿ ವಿಸರ್ಜನೆ ವೇಳೆ ಭೀಕರವಾದ ವಿದ್ಯುತ್ ಅವಘಡ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಸಂಭವಿಸಿದೆ.
ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಬಿ.ಹೊಸಳ್ಳಿ ಗ್ರಾಮದ ಗಣಪತಿಯ ವಿಸರ್ಜನೆ ವೇಳೆ ಈ ವಿದ್ಯುತ್ ದುರಂತ ಸಂಭವಿಸಿದ್ದು ಮೂವರು ದುರ್ಮರಣವನ್ನಪ್ಪಿದ್ದಾರೆ. ರಾಜು (47), ರಚನಾ (26), ಪಾರ್ವತಿ (35) ಎಂಬುವವರು ಈ ಅವಘಡದಲ್ಲಿ ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನೂ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ಹಾಗೂ ಹಾಸನಕ್ಕೆ ರವಾನೆ ಮಾಡಲಾಗಿದೆ.
ಚಿಕ್ಕಮಗಳೂರು: ಮೊಬೈಲ್ ನಲ್ಲಿ ಮಾತನಾಡಿಕೊಂಡು ಬೈಕ್ ಚಾಲನೆ ನಡೆಸುತ್ತಿದ್ದ ಯುವಕನ ದುರ್ಮರಣ
ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು ಗಂಭೀರ ಸ್ಥಿತಿಯಲ್ಲಿರುವ ಉಳಿದ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಮತ್ತು ಹಾಸನದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಆದರೆ ಅವರ ಸ್ಥಿತಿ ಸಹ ಗಂಭೀರವಾಗಿದೆ ಎಂಬ ಮಾಹಿತಿ ದೊರೆತಿದೆ. ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.
- ತನು ಕೊಟ್ಟಿಗೆಹಾರ, ವರದಿಗಾರರು






0 Comments