ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ)  ಶಿವಮೊಗ್ಗ ಪೊಲೀಸರು ಇತ್ತೀಚೆಗೆ ಪ್ರೇಮ್ ಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದ ಶಂಕಿತ ಉಗ್ರರಿಂದ ಬಾಂಬ್ ತಯಾರಿಗೆ ಬೇಕಿರುವ ಕಚ್ಛಾ ಸಾಮಗ್ರಿಗಳು ಸೇರಿದಂತೆ ಹಲವು ಮಹತ್ವದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಲಕ್ಷ್ಮೀ ಪ್ರಸಾದ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದನ್ನೂ ಓದಿ: ವೆರಿಕೋಸ್ ವೇನ್ಸ್ ಮುಕ್ತ ಸಮಾಜ ನಿರ್ಮಾಣದ ಸಲುವಾಗಿ ಸುಂಟಿಕೊಪ್ಪದಲ್ಲಿ ಮಾಹಿತಿ ಹಾಗೂ ಅರಿವು ಉಪನ್ಯಾಸ

ಪ್ರೇಮ್​ಸಿಂಗ್ ಹತ್ಯೆ ಪ್ರಕರಣದಲ್ಲಿ ಜಬೀ ಎಂಬಾತನ ಬಂಧನವಾಗಿತ್ತು. ಜಬೀಯನ್ನು ವಿಚಾರಣೆ ಮಾಡಿದಾಗ ಶಾರಿಕ್ ಎಂಬವನ ವಿಚಾರ ಬೆಳಕಿಗೆ ಬಂದಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದ್ದು ಇದುವರೆಗೂ ಒಟ್ಟು 11 ಸ್ಥಳಗಳಲ್ಲಿ ದಾಳಿ ಮಾಡಿದ್ದು ಹಲವು ಮಹತ್ವದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.


ಬಂಧಿತರಿಂದ ಎರಡು ಲ್ಯಾಪ್‌ಟಾಪ್‌, 14 ಮೊಬೈಲ್,ಒಂದು ಪೆನ್‌ಡ್ರೈವ್, ಒಂದು ಡಾಂಗಲ್ ಹಾಗೂ ಇತರೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಸ್ಫೋಟದ ಸ್ಥಳದಲ್ಲಿ ಬಾಂಬ್‌ನ ಅವಶೇಷಗಳು ಸಹ ಪತ್ತೆಯಾಗಿವೆ. ಆರೋಪಿಯು ಆಗಸ್ಟ್​​ ತಿಂಗಳಲ್ಲಿ ರಾಷ್ಟ್ರಧ್ವಜ ಸುಟ್ಟಿರುವ ಮಾಹಿತಿಯೂ ಲಭ್ಯವಾಗಿದೆ. ಬಂಧಿತರಿಂದ ಬಾಂಬ್ ತಯಾರಿಸಲು ಬೇಕಾದ ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಎಸ್ಪಿ ತಿಳಿಸಿದರು.

ಬಂಧಿತರಿಂದ ಎಲ್ಲರೂ ಇಸ್ಲಾಮಿಕ್ ಸ್ಟೇಟ್ ಸಿದ್ಧಾಂತಕ್ಕೆ ಬದ್ಧರಾಗಿದ್ದರು. ನಮಗೆ ಬ್ರಿಟೀಷರಿಂದ ಮಾತ್ರ ಸ್ವಾತಂತ್ರ್ಯ ಸಿಕ್ಕಿದೆ. ನೈಜ ಸ್ವಾತಂತ್ರ್ಯ ಇಲ್ಲ. ಇಸ್ಲಾಮಿಕ್ ಸ್ಟೇಟ್ ನಿರ್ಮಾಣ, ಷರಿಯಾ ಕಾನೂನುಗಳಿಂದ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂಧಿದ್ದರು.

ಒಟ್ಟಾರೆ ತನಿಖೆಯಲ್ಲಿ ಬೆಳಕಿಗೆ ಬಂದಿರುವ ಅಂಶಗಳು-

ಶಾರೀಖ್ ಮುಸ್ಲಿಂ ಮೂಲಭೂತವಾದಿ ಬಗ್ಗೆ ಸದಾ ಮಾತನಾಡುತ್ತಿದ್ದನು. ಅಂತದ್ದೇ ಫೈಲ್​ಗಳನ್ನು ಹಂಚಿಕೊಳ್ಳುತ್ತಿದ್ದರು. 

ಭಾರತದಲ್ಲಿ ಐಸಿಸ್ ಮಾದರಿಯಲ್ಲಿ ಭಯೋತ್ಪಾದಕ ಕೃತ್ಯ ಮುಂದುವರಿಸಲು ಆರೋಪಿಗಳು ಯೋಜನೆ ರೂಪಿಸಿದ್ದರು.

ಕಾಫೀರರ (ಇಸ್ಲಾಂ ಧರ್ಮಕ್ಕೆ ಸೇರದವರು) ವಿರುದ್ಧ ಜಿಹಾದ್ ಮಾಡಲು ಇವರು ಸಿದ್ಧತೆ ಮಾಡಿಕೊಳ್ಳುತ್ತಿದ್ದರು.

ಐಸಿಸ್​ನ ಅಧಿಕೃತ ಅಲ್​-ಹಯಾತ್ ಎಂಬ ಟೆಲಿಗ್ರಾಮ್ ಚಾನೆಲ್​ಗೆ ಸದಸ್ಯರಾಗಿದ್ದರು.

ಶಾರೀಖ್ ಹಂಚಿಕೊಂಡಿದ್ದ ಫೈಲ್​ಗಳಲ್ಲಿದ್ದ ಬಾಂಬ್ ತಯಾರಿಸುವ ವಿವರ ಅಭ್ಯಾಸ ಮಾಡಿದ್ದ ಇತರರು ಅದಕ್ಕೆ ಬೇಕಿರುವ ಟೈಮರ್, ರಿಲೆ, ಸರ್ಕೀಟ್​ಗಳನ್ನು ಆನ್ಲೈನ್ ಶಾಪಿಂಗ್ ಮೂಲಕ ಖರೀದಿಸಿದ್ದರು. ಇತರ ಅಗತ್ಯ ವಸ್ತುಗಳನ್ನು ಶಿವಮೊಗ್ಗದ ಸ್ಥಳೀಯ ವರ್ತಕರ ಅಂಗಡಿಗಳಿಂದ ಖರೀದಿಸಿದ್ದರು.

ಕೆಮ್ಮನ ಗುಂಡಿಯಲ್ಲಿ ಪ್ರಾಯೋಗಿಕವಾಗಿ ಬಾಂಬ್ ಸ್ಫೋಟ ಸಹ ನಡೆಸಿದ್ದರು. ಹಾಗೆಯೇ ಈ ಕಿಡಿಗೇಡಿಗಳು ರಾಷ್ಟ್ರಧ್ವಜವನ್ನು ಸುಟ್ಟು, ಅದನ್ನು ವಿಡಿಯೋ ಮಾಡಿಟ್ಟುಕೊಂಡಿದ್ದರು. ಎಂಬೆಲ್ಲಾ ಮಾಹಿತಿಗಳು ಲಭ್ಯವಾಗಿದೆ