ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಶಾಲಾ ಬಾಲಕಿಗೆ ಕಾಮುಕಾನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. 

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡೇತೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಭಾಕರ್ ಬಂಧಿತ ಆರೋಪಿ.

ಇದನ್ನೂ ಓದಿ: ಮೂಡಿಗೆರೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಒಂದು ಎಕರೆ ತೋಟ; ಸಂಕಷ್ಟಕ್ಕೆ ಸಿಲುಕಿದ ರೈತ


ಈತ ಇಲ್ಲಿನ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ಎಸಗಿದ್ದಾನೆಂದು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸಂಬಂಧ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮಕ್ಕೆ ಅನುವು ಮಾಡಿದ್ದಾರೆ.

ಜೈಲಿನಲ್ಲಿರುವ ಹೆಚ್ಚಿನವರು ಪೋಕ್ಸೋ ವಿಚಾರಣಾಧೀನ ಕೈದಿಗಳು: 

ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನ ಕಳೆದಂತೆ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ದೌರ್ಜನ್ಯಗಳು ಹೆಚ್ಚುತ್ತಿದ್ದು ಈ ಕುರಿತಾಗಿ ಅರಿವು ಮೂಡಿಸುವ ಕಾರ್ಯಾಗಾರಗಳು, ಕೌನ್ಸೆಲಿಂಗ್ ಗಳು ನಡೆಯುತ್ತಲೇ ಇದ್ದರೂ ಪೋಕ್ಸೋ ಪ್ರಕರಣಗಳು ವರದಿಯಾಗುತ್ತಲೇ ಇದೆ.

ಕಳೆದ ಕೆಲ ದಿನಗಳ ಹಿಂದಿನ ಅಂಕಿ ಅಂಶಗಳ ಪ್ರಕಾರ ಇರುವ 269 ವಿಚಾರಣಾಧೀನ ಕೈದಿಗಳಲ್ಲಿ 160 ಕೈದಿಗಳು ಪೋಕ್ಸೋ ಕೈದಿಗಳಿದ್ದಾರೆ. ಮಲೆನಾಡ ಜೈಲು, ಪೋಕ್ಸೋ ಜೈಲೆನ್ನುವ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಪೋಕ್ಸೋ ಅಪರಾಧಿಗಳಲ್ಲಿ ಮಲೆನಾಡಿನ ಅಪರಾಧಿಗಳೇ ಹೆಚ್ಚು.