ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕಳ್ಳರು ಅಕ್ರಮವಾಗಿ ಗಂಧದ ಮರಗಳನ್ನು ಕದ್ದೊಯ್ದಿರುವ ಘಟನೆ ಹಾಸನದ ಹೊರವಲಯದಲ್ಲಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಆಟೋರಿಕ್ಷಾ ಚಾಲಕನ ದುರ್ಮರಣ
ಹಾಸನ ನಗರದ ಹೊರವಲಯದಲ್ಲಿರುವ ಅರಸೀಕೆರೆ ರಸ್ತೆಯ ದೂರವಾಣಿ ನಗರದಲ್ಲಿದ್ದ ಗಂಧದ ಮರಗಳನ್ನು ಕಳ್ಳರು ನಿನ್ನೆ ರಾತ್ರಿ ಕತ್ತರಿಸಿ ಕದ್ದೊಯ್ದಿದ್ದು, ಹಣಕ್ಕಾಗಿ ಈ ಕೃತ್ಯವನ್ನು ನಡೆಸಿರುವ ಶಂಕೆ ಸ್ಥಳೀಯರಲ್ಲಿ ಎದುರಾಗಿದೆ. ಘಟನಾ ಸಂಬಂಧ ಸಾರ್ವಜನಿಕ ವಲಯದಲ್ಲೂ ಆತಂಕ ಮೂಡಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಘಟನಾ ಕುರಿತಂತೆ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಘಟನಾ ಸಂಬಂಧ ಹಾಸನದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಳ್ಳರ ಪತ್ತೆಕಾರ್ಯ ಆರಂಭಿಸಿದ್ದಾರೆ.
ಒತ್ತುವರಿ ಮಾಡಿದ್ದ 9.92 ಎಕರೆ ಜಾಗವನ್ನು ಮರಳಿ ಅರಣ್ಯ ಇಲಾಖೆಗೆ ಹಿಂದಿರುಗಿಸಿದ ರೆಸಾರ್ಟ್ ಮಾಲೀಕರು :
ರೆಸಾರ್ಟ್ ನ ಮಾಲೀಕರೇ ಒತ್ತುವರಿ ಮಾಡಿಕೊಂಡಿದ್ದ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗವನ್ನು ಇಲಾಖೆಗೆ ಮರಳಿಸಿರುವ ಘಟನೆ ನಡೆದಿದೆ.
ವಿರಾಜಪೇಟೆಯ ಪೆರುಂಬಾಡಿ ಬಳಿಯ ಆರ್ಜಿ ಗ್ರಾಮದ ಸರ್ವೇ ನಂಬರ್ 333/1 ಸೆಕ್ಷನ್ 4 ರ ಅರಣ್ಯ ಜಾಗವನ್ನು ಇಲ್ಲಿನ ರೆಸಾರ್ಟ್ ಮಾಲೀಕರು ಒತ್ತುವರಿ ಮಾಡಿರುವುದಾಗಿ ಇಲ್ಲಿನ ಸ್ಥಳೀಯರು ಕಂದಾಯ ಅದಾಲತ್ ನಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಜಂಟಿ ಸರ್ವೇ ಕಾರ್ಯ ನಡೆಸಿದ ಅರಣ್ಯ ಹಾಗೂ ಭೂ ದಾಖಲೆಗಳ ಇಲಾಖೆ 9.92 ಎಕರೆ ಪ್ರದೇಶವು ಒತ್ತುವರಿಯಾಗಿದೆ ಎಂದು ಸಾಬೀತುಪಡಿಸಿತ್ತು.
ಈ ನಂತರದಲ್ಲಿ ಒತ್ತುವರಿ ಕುರಿತಾಗಿ ತೇಲಪಂಡ ಪ್ರಮೋದ್ ಸೋಮಯ್ಯ, ಅಜ್ಜಿನಂಡ ತಮ್ಮು ಪೂವಯ್ಯ, ಪಾಂಡಿರ ಮುತಣ್ಣ ಸೇರಿದಂತೆ ಮುಂತಾದವರು ದೂರು ನೀಡಿದ್ದರು. ಈ ಕುರಿತಾಗಿ ಇಲಾಖೆ ನೀಡಿದ ನೋಟೀಸ್ ಗೆ ರೆಸಾರ್ಟ್ ಮಾಲೀಕರು ಮರಳಿ ಒತ್ತುವರಿ ಮಾಡಿರುವ ಜಾಗವನ್ನು ಹಿಂದಿರುಗಿಸುವುದಾಗಿ ತಿಳಿಸಿ ಒತ್ತುವರಿ ಮಾಡಿದ್ದ ಜಾಗವನ್ನು ಮರಳಿ ನೀಡಿದ್ದಾರೆ.
ತೆರವು ಕಾರ್ಯಾಚರಣೆಯು ACF ನೆಹರು ಅವರ ನೇತೃತ್ವದಲ್ಲಿ ನಡೆದಿದ್ದು ಈ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.


.jpeg)
.jpeg)

%20-%20Copy.jpeg)



0 Comments