ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಡಾ.B.R ಅಂಬೇಡ್ಕರ್ ಭವನ ಮತ್ತು ಡಾ. ಬಾಬು ಜಗಜೀವನ ರಾಂ ಭವನದ ನಿರ್ಮಾಣಕ್ಕಾಗಿ ಸರ್ಕಾರ ಅನುದಾನ ಮಂಜೂರಾತಿಯನ್ನು ಬಿಡುಗಡೆಗೊಳಿಸಿ ಆದೇಶಿಸಿದೆ.
ಇದನ್ನೂ ಓದಿ: ಚಿಕ್ಕಮಗಳೂರು: ಮೊಬೈಲ್ ನಲ್ಲಿ ಮಾತನಾಡಿಕೊಂಡು ಬೈಕ್ ಚಾಲನೆ ನಡೆಸುತ್ತಿದ್ದ ಯುವಕನ ದುರ್ಮರಣ
ಚಿಕ್ಕಮಗಳೂರು, ಕೊಡಗು, ದಕ್ಷಿಣಕನ್ನಡ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ನ ಪ್ರದೇಶಗಳಲ್ಲಿ ಡಾ.B.R ಅಂಬೇಡ್ಕರ್ ಭವನ, ಡಾ. ಬಾಬು ಜಗಜೀವನ ರಾಂ ಭವನವನ್ನು ನಿರ್ಮಾಣ ಮಾಡುವ ಸಲುವಾಗಿ ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಭೋವಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕಾಗಿ 10 ಲಕ್ಷ ರೂಪಾಯಿಗಳ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ನೂರಂಬಡ ಮಠದ ಪರಿಶಿಷ್ಟ ಜಾತಿ ಕಾಲೋನಿಯ ಬಳಿ ಸಮುದಾಯ ಭವನ ನಿರ್ಮಾಣಕ್ಕೆ 50 ಲಕ್ಷ, ಅಂತೆಯೇ ಮೈಸೂರಿನ H.D ಕೋಟೆ ವ್ಯಾಪ್ತಿಯಲ್ಲಿ ಡಾ.ಬಾಬು ಜಗಜೀವನರಾಂ ಸಮುದಾಯ ಭವನದ ನಿರ್ಮಾಣಕ್ಕೆ 50 ಲಕ್ಷ, ದಾವಣಗೆರೆಯ ವಡ್ನೇರಿ ಗ್ರಾಮದಲ್ಲಿ ಡಾ. B.R ಅಂಬೇಡ್ಕರ್ ಸಮುದಾಯ ಭವನದ ನಿರ್ಮಾಣಕ್ಕಾಗಿ 20 ಲಕ್ಷ ರೂಪಾಯಿ ಹಣವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.
ಒಟ್ಟು ಒಂಭತ್ತು ಭವನಗಳ ನಿರ್ಮಾಣಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಪರಿಶಿಷ್ಟ ಜಾತಿಯ ಮತ್ತು ಪಂಗಡಗಳ ಚಟುವಟಿಕೆಗಳಿಗಾಗಿ, ಅಭಿವೃದ್ಧಿಗಾಗಿ ಈ ಸೌಲಭ್ಯವನ್ನು ನೀಡುತ್ತಿದ್ದು, ಕಾಮಗಾರಿಗಳ ಭೌತಿಕ ಹಾಗೂ ಆರ್ಥಿಕ ಪ್ರಗತಿಯನ್ನು ಪರಿಶೀಲಿಸಿ ಬಾಕಿ ಅನುದಾನದ ಬಿಡುಗಡೆಯ ಕುರಿತು ಕ್ರಮವಹಿಸುವುದಾಗಿ ತಿಳಿಸಿದೆ.





0 Comments