ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕೊಪ್ಪದಲ್ಲಿ ಸಂಭವಿಸಿದ ವಿದ್ಯುತ್ ಅವಘಡದಿಂದಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿ ಹೊತ್ತಿ ಉರಿದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ನಿನ್ನೆ ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು, ಕೊಪ್ಪದ ಹೊರವಲಯದಲ್ಲಿರುವ ಹುಲುಮಕ್ಕಿ ಕಾರ್ತಿಕ್ ಭಟ್ ಎಂಬುವವರ ಗ್ರಂಥಿಕೆ ಅಂಗಡಿ ವಿದ್ಯುತ್ ಅವಘಡದಿಂದ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. 

ಇದನ್ನೂ ಓದಿ: ಕೊಪ್ಪ: ಜೆಡಿಎಸ್ ತೊರೆದು ಮರಳಿ ಬಿಜೆಪಿ ಸೇರಿದ ಗ್ರಾಮ ಪಂಚಾಯತ್ ಅಧ್ಯಕ್ಷೆ

ಅಂಗಡಿಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಹಾನಿಗೀಡಾಗಿದ್ದು, ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡಿದರು. ಘಟನಾ ಸ್ಥಳಕ್ಕೆ ಕೊಪ್ಪ ಠಾಣೆಯ ಪಿಎಸ್ಸೈ ಶ್ರೀನಾಥ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಭೇಟಿ ನೀಡಿ ತಹಸೀಲ್ದಾರ್ ರ ಬಳಿ ಈ ಕುರಿತು ದೂರವಾಣಿ ಮುಖಾಂತರ ಮಾತನಾಡಿದರು.