ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಆಟೋದಲ್ಲಿ ಬಿಟ್ಟಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಹಿಂದಿರುಗಿಸಿರುವ ಆಟೋ ಚಾಲಕ ಪ್ರಶಂಸೆ ಗೀಡಾಗಿದ್ದಾರೆ.

ಇದನ್ನೂ ಓದಿ:ಜ್ಞಾನವಾಪಿ ವಿವಾದ: ಹಿಂದೂಗಳ ಪರ ತೀರ್ಪು ಹಿನ್ನೆಲೆ, ಬಜರಂಗದಳದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಸಂಭ್ರಮಾಚರಣೆ

ಶಿವಮೊಗ್ಗ ನಗರದಲ್ಲಿ ಮೊಹಮ್ಮದ್ ಗೌಸ್ ಎಂಬುವರು ಆಟೋ ಚಾಲನೆ ಮಾಡುತ್ತಾ ತಮ್ಮ ಜೀವನ ನಿರ್ವಹಣೆ ಮಾಡುತ್ತಿದ್ದರು. ಸೆ.10ರಂದು ಅವರ ಆಟೋದಲ್ಲಿ ಮಹಿಳೆ ಶಹತಾಜ್ ಭಾನು ಎಂಬುವವರು ನಗರದ ಅಶೋಕ ಸರ್ಕಲ್​ನಿಂದ ಟಿಪ್ಪುನಗರಕ್ಕೆ ಪ್ರಯಾಣಿಸಿದ್ದರು.


ಮಹಿಳೆ ಶಹತಾಜ್ ಭಾನು ಆಟೋದಿಂದ ಇಳಿಯುವಾಗ ಆಟೋದಲ್ಲಿ ಬ್ಯಾಗ್ ಬಿಟ್ಟು ಹೋಗಿದ್ದರು. ನಂತರ ಮೊಹಮ್ಮದ್ ಗೌಸ್ ಬ್ಯಾಗ್​ನ್ನು ಮಹಿಳೆಗೆ ವಾಪಾಸ್ ಮಾಡಿ ಮಾನವೀಯತೆ ಮೆರೆದಿದ್ದಾರೆ. ಬ್ಯಾಗಿನಲ್ಲಿ ಲಕ್ಷಾಂತರ ಬೆಲೆ ಬಾಳುವ ಬ್ಯಾಗ್ ನಲ್ಲಿ 40 ಗ್ರಾಂ ಚಿನ್ನಾಭರಣವಿತ್ತು.

ಆಟೋ ಚಾಲಕ ಮಹಮ್ಮದ್ ಗೌಸ್ ಕಾರ್ಯಕ್ಕೆ ಎಸ್ಪಿ ಅಭಿನಂದನೆ ಸಲ್ಲಿಸಿದ್ದು, ಜಿಲ್ಲಾ ರಕ್ಷಣಾಧಿಕಾರಿ ಡಾ. ಲಕ್ಷ್ಮೀ ಪ್ರಸಾದ್ ಅಭಿನಂದನಾ ಪತ್ರ ನೀಡಿ ಸನ್ಮಾನ ಮಾಡಿದ್ದಾರೆ. ಅಂತೆಯೇ ಸ್ಥಳೀಯರು ಕೂಡ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.