ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಂದರ್ ಬಾಹರ್ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರ ದಾಳಿ ನಡೆಸಿ ನಗದು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಬೆಂಕಿಪೊಟ್ಟಣ ಕೇಳುವ ನೆಪದಲ್ಲಿ ಲಾರಿ ಹತ್ತಿ ಸುಲಿಗೆ ಮಾಡಿದ ಅಪರಿಚಿತರು
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮುಗಳಿ ಗ್ರಾಮದಲ್ಲಿ ಜೂಜಾಟ ಆಡುತ್ತಿರುವುದರ ಕುರಿತು ಖಚಿತ ಮಾಹಿತಿ ಪಡೆದ ಪಿ.ಎಸ್.ಐ ಅಜ್ಜಂಪುರ ಮತ್ತು ಸಿಬ್ಬಂದಿಗಳು ದಾಳಿ ನಡೆಸಿ, ಅಕ್ರಮವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ 8 ಜನರ ಪೈಕಿ ನಾಲ್ವರನ್ನು ವಶಕ್ಕೆ ಪಡೆದು, ಜೂಜಾಟಕ್ಕೆ ಬಳಸಿದ್ದ ರೂ.12,500 ನಗದು, ನಾಲ್ಕು ದ್ವಿಚಕ್ರ ವಾಹನಗಳು ಮತ್ತು ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿರುತ್ತಾರೆ.
ನಾಗರಾಜ್, ಮಂಜುನಾಥ, ಮಧು ಹಾಗೂ ಮೈಲಾರಪ್ಪ ಎಂಬ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪೊಲೀಸರನ್ನು ಕಂಡು ಓಡಿ ಹೋದವರನ್ನು ಗುರುಮೂರ್ತಿ, ಪರಶುರಾಮ, ನಂದೀಶ, ಸಿದ್ದಾರೂಢ ಎಂಬ ನಾಲ್ವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಇಂತಹ ಅಪರಾಧ ಕೃತ್ಯಗಳನ್ನು ಯಾರೇ ಎಸಗಿದರೂ ಕೂಡ ಅವರ ಮೇಲೆ ಕಾನೂನಿನ ಅಡಿಯಲ್ಲಿ ಸೂಕ್ತವಾದ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.





0 Comments