ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಅಳವಡಿಸಲಾಗಿದ್ದ ಶುಭಕೋರುವ ಬ್ಯಾನರ್ ನಲ್ಲಿರುವ ಡಾ. B.R ಅಂಬೇಡ್ಕರ್ ಫೋಟೋಗೆ ಕಿಡಿಗೇಡಿಗಳು ಚಪ್ಪಲಿಯಿಂದ ಹೊಡೆದು, ಫ್ಲೆಕ್ಸ್ ನ್ನು ಬ್ಲೇಡ್ ನಿಂದ ಹರಿದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳ ಕಳ್ಳತನ: ದೂರು ದಾಖಲು
ಇಂದು ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಲ್ಲಿ ಅಳವಡಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.B.R ಅಂಬೇಡ್ಕರ್ ಭಾವಚಿತ್ರವಿರುವ ಫ್ಲೆಕ್ಸ್ ಗೆ ಯಾರೋ ಕಿಡಿಗೇಡಿಗಳು ಚಪ್ಪಲಿಯಿಂದ ಹೊಡೆದಿರುವ ಗುರುತುಗಳು ಪತ್ತೆಯಾಗಿದ್ದು ಈ ಕುರಿತಾಗಿ ಸ್ಥಳದಲ್ಲಿ ಜಮಾವಣೆಗೊಳ್ಳುತ್ತಿರುವ ದಲಿತ ಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ದಿನೇ ದಿನೇ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅಗೌರವ ತೋರುವ ರೀತಿಯಲ್ಲಿ ಘಟನೆಗಳು ನಡೆಯುತ್ತಿದ್ದು ಇದನ್ನು ಭೀಮ್ ಆರ್ಮಿ ಖಂಡಿಸುತ್ತದೆ. ಇಂದು ನಾವು ಪ್ರತಿಭಟನೆ ನಡೆಸುತ್ತೇವೆ, ಎರಡು ದಿನಗಳಲ್ಲಿ ಆರೋಪಿಯನ್ನು ಬಂಧಿಸದೇ ಇದ್ದಲ್ಲಿ ಚಿಕ್ಕಮಗಳೂರು ಬಂದ್ ಗೆ ಕರೆ ನೀಡಲಾಗುವುದು - ಹೊನ್ನೇಶ್, ಭೀಮ್ ಆರ್ಮಿ ಗೌರವಾಧ್ಯಕ್ಷ
ನಗರಸಭೆ ಪೌರಾಯುಕ್ತರಾದ ಬಿ.ಸಿ ಬಸವರಾಜು ಪೋಟೋವನ್ನು ಬ್ಲೇಡ್ ನಿಂದ ಕತ್ತರಿಸಲಾಗಿದ್ದು, ಅಂಬೇಡ್ಕರ್ ಅವರ ಫೋಟೋ ಗೆ ಚಪ್ಪಲಿಯಿಂದ ಹೊಡೆದಿರುವ ಗುರುತುಗಳು ಪತ್ತೆಯಾಗಿದ್ದು ಘಟನೆಗೆ ಸಂಬಂಧಿಸಿದಂತೆ ದಲಿತ ಪರ ಸಂಘಟನೆಗಳ ಮುಖಂಡರು ಸ್ಥಳದಲ್ಲಿ ಜಮಾವಣೆಗೊಳ್ಳುತ್ತಿದ್ದು ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.
- ಮಾಹಿತಿ, ಪಿತಾಮಹ ದಿನಪತ್ರಿಕೆ





0 Comments