ಕೊಡಗು: (ನ್ಯೂಸ್ ಮಲ್ನಾಡ್ ವರದಿ)ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸಹಕಾರ ಸಂಘಗಳ ಹಿರಿಯ ನೀರಿಕ್ಷಕ ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. 

ಲಂಚ ಸ್ವೀಕರಿಸುತ್ತಿದ್ದ ಸರ್ಕಾರಿ ಅಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ವಿನಯ್ ಗುರೂಜಿ ಪಾದಪೂಜೆ ಮಾಡಿದ ನಯನ ಮೋಟಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕ್ಲಾಸ್


ಕೊಡಗು ಸಹಕಾರ ಸಂಘಗಳ ಹಿರಿಯ ನಿರೀಕ್ಷಕ ಮಂಜುನಾಥ್ ಲಂಚ ಪಡೆಯುತ್ತಿದ್ದಾಗ ಸೆರೆಸಿಕ್ಕಿದ್ದಾರೆ. ಮಡಿಕೇರಿಯ ಶಿಶು ಕಲ್ಯಾಣ ಸಂಸ್ಥೆ ಕಟ್ಟಡದಲ್ಲಿರುವ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದೆ ಎಂಬ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ಈ ವೇಳೆ ಹಿರಿಯ ನಿರೀಕ್ಷಕ ಮಂಜುನಾಥ್ ಹೊರಗುತ್ತಿಗೆ ನೌಕರರ ಸಂಘ ನೋಂದಣಿಗೆ ಹತ್ತು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಸಂಘದ ಸದಸ್ಯರಿಂದ 8,000 ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದ್ದು ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.