ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕೊಪ್ಪದಲ್ಲಿ ಮನೆಯ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳ್ಳತನ ನಡೆಸಿದ್ದ ಖದೀಮನನ್ನು ಪೊಲೀಸರು ಬಂಧಿಸಿ ಬೈಕ್ ನ್ನು ವಶಕ್ಕೆ ಪಡೆದಿದ್ದಾರೆ. 

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮುನಿಯೂರು ಬಂಡಿಗಡಿ ಗ್ರಾಮದಲ್ಲಿ ಮನೆಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ 70,000 ಬೆಲೆಯ ದ್ವಿಚಕ್ರ ವಾಹನವನ್ನು ಕಳವು ಮಾಡಿದ್ದ ಓರ್ವ ಆರೋಪಿಯನ್ನು ಹರಿಹರಪುರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಕಳಸ: ಅತ್ತೆ ಮಾವನ ಜೊತೆ ಪ್ರೀತಿಯಿಂದ ಇರುವಂತೆ ಮಾಡು, ಸಂಬಳ ತಂದು ನನ್ನ ಕೈಗೆ ತಂದು ಕೊಡುವಂತಾಗಲಿ ಎಂದು ದೇವರಿಗೆ ಪತ್ರ ಬರೆದ ಭಕ್ತ


ಈತನಿಂದ ಕಳುವಾಗಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿರುವ ಪೊಲೀಸರು ಕಳ್ಳತನದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಣೆ ನಡೆಸುತ್ತಿದ್ದಾರೆ. ಇತ್ತೀಚಿಗೆ ಮಲೆನಾಡು ಭಾಗದಲ್ಲಿ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದ್ದು ಕೈಚಳಕ ತೋರುವ ಮೂಲಕ ಅನೇಕರ ವಾಹನಗಳನ್ನು ಕಳ್ಳರು ಅಪಹರಿಸುತ್ತಿದ್ದಾರೆ. 

ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೈಕ್ ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದು ಈ ಕುರಿತಾಗಿ ಬೈಕ್ ಚಾಲನೆ ನಡೆಸುವವರು ಎಚ್ಚರಿಕೆ ವಹಿಸುವುದು ಸೂಕ್ತ. ಮುಂಜಾಗ್ರತಾ ಕ್ರಮವಾಗಿ ಆದಷ್ಟು ಸಿಸಿಟಿವಿ ಕ್ಯಾಮೆರಾಗಳಿರುವ ಜಾಗಗಳಲ್ಲಿ ಬೈಕ್ ಪಾರ್ಕಿಂಗ್ ನಡೆಸುವುದು ಸಮಂಜಸವಾಗಿದೆ.