ಕೊಡಗು: (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ನಕ್ಷತ್ರ ಆಮೆಯನ್ನು ಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಸೆ.07 ರಿಂದ 09 ರ ವರೆಗೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದೆ ಕೇಂದ್ರದ ಮೂರು ತಂಡಗಳು
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮ ವ್ಯಾಪ್ತಿಯ ಕೂಡಿಗೆ ಕುಶಾಲನಗರ ಮುಖ್ಯ ರಸ್ತೆಯಲ್ಲಿ ಭಾರತ್ ಪೆಟ್ರೋಲ್ ಬಂಕ್ ಮುಂಭಾಗ ನಕ್ಷತ್ರ ಆಮೆಯನ್ನು ಜಿ.ಡಿ ಗಿರೀಶ್ ಹಾಗೂ ಹಾಸನ ಮೂಲದ ಹೆಚ್.ಎಂ ಅಭಿಷೇಕ್ ಎಂಬಾತ ಸಾಗಾಟ ನಡೆಸುತ್ತಿದ್ದರು.
ಈ ಕುರಿತು ಮಾಹಿತಿ ದೊರೆಯುತ್ತಿದ್ದಂತೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಒಂದು ನಕ್ಷತ್ರ ಆಮೆ ಹಾಗೂ ಸಾಗಾಟಕ್ಕೆ ಬಳಸಿದ್ದ ಕಾರ್ ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆಯು ಹಿರಿಯ ಅರಣ್ಯ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದಿದ್ದು ಈ ಕಾರ್ಯಾಚರಣೆಯಲ್ಲಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ.ವಿ ಶಿವರಾಮ್,ಉಪವಲಯ ಅರಣ್ಯಾಧಿಕಾರಿ ಅನಿಲ್ ಡಿಸೋಜ, ಶ್ರವಣಕುಮಾರ್, ಚೇತನ್ ಸೇರಿದಂತೆ ಸಿಬ್ಬಂದಿಗಳು ಭಾಗಿಯಾಗಿದ್ದರು.

%20-%20Copy.jpeg)



0 Comments