ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಅಕ್ರಮ ಕಳ್ಳಭಟ್ಟಿ ತಯಾರಿಕಾ ಅಡ್ಡೆಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯ ಸಹಿತ ಅಪಾರ ಪ್ರಮಾಣದ ಬೆಲ್ಲದಕೊಳೆ ಹಾಗೂ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಮಲೆಮನೆ ಎಂಬಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಖಚಿತ ಮಾಹಿತಿಯನ್ನು ಆಧರಿಸಿದ ಬಾಳೂರು ಠಾಣೆಯ ಪೊಲೀಸರು ಮಲೆಮನೆ ಸುರೇಶ ಎಂಬಾತನನ್ನು ಬಂಧಿಸಿ ಆತನ ಬಳಿ ಇದ್ದ 200 ಲೀಟರ್ ಬೆಲ್ಲದ ಕೊಳೆ ಹಾಗೂ ಎರಡು ಲೀಟರ್ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: PFI ಕಾರ್ಯಕರ್ತನ ಮನೆ ಮೇಲೆ ಅಧಿಕಾರಿಗಳಿಂದ ದಾಳಿ; ಪರಿಶೀಲನೆ


ಈ ಭಾಗದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಅನೇಕ ಚಟುವಟಿಕೆಗಳನ್ನು ನಿಯಂತ್ರಿಸುವಲ್ಲಿ ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದು, ಈ ವ್ಯಾಪ್ತಿಯಲ್ಲಿ ಎಗಿಲ್ಲದೇ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. 

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಬ್ಇನ್ ಸ್ಪೆಕ್ಟರ್ ಸಿ.ಸಿ.ಪವನ್ ಕುಮಾರ್, ಸಿಬ್ಬಂದಿಗಳಾದ ರಾಜೇಂದ್ರ, ಜಾಫರ್, ಅಭಿಲಾಷ್, ಪ್ರದೀಪ್, ವಸಂತ್, ಸತೀಶ್ ಭಾಗವಹಿಸಿದ್ದರು.

ತನು ಕೊಟ್ಟಿಗೆಹಾರ, ವರದಿಗಾರರು

ಚಿಕ್ಕಮಗಳೂರು: ಕಿಲ್ ಯೂ, ಜಿಹಾದ್ ಎಂದು ಕಾರಿನ ಮೇಲೆ ಅಶ್ಲೀಲ ಪದಗಳನ್ನು ಬರೆದು ಸ್ಕ್ರಾಚ್ ಮಾಡಿದ್ದ ಇಬ್ಬರು ಆರೋಪಿಗಳು ಸೆರೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಡೂರು ಪಟ್ಟಣದಲ್ಲಿ ಕಾರಿನ ಮೇಲೆ ಜಿಹಾದ್, ಅಶ್ಲೀಲ ಮತ್ತು ಕೊಲೆಬೆದರಿಕೆ ಪದಗಳನ್ನು ಗೀಚಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು 48 ಗಂಟೆಗಳಲ್ಲಿ ವಶಕ್ಕೆ ಪಡೆದಿದ್ದಾರೆ. 

24.09.2022 ರ ರಾತ್ರಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಲಕ್ಷ್ಮೀಶ್ ನಗರದ ವಾಸಿ, ರಾಷ್ಟೀಯ ಸ್ವಯಂ ಸೇವಕ ಸಂಘದ ಜವಾಬ್ದಾರಿಯನ್ನು ಹೊಂದಿದ್ದ ಡಾ.ಶಶಿಧರ್ ಎಂಬುವವರು ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರಗಳ ಗಾಳಿಯನ್ನು ತೆಗೆದು, ಕಾರಿನ ಮೇಲೆ ಜಿಹಾದ್, ಕಿಲ್ ಯೂ ಸೇರಿದಂತೆ ಅಶ್ಲೀಲ ಪದಗಳನ್ನು ಬರೆದು ಬಾನೆಟ್, ಗ್ಲಾಸ್ ಮತ್ತು ಎಡಗಡೆಯ ಡೋರ್ ಮೇಲೆ ಕಲ್ಲಿನಿಂದ ಗೀಚಿ ಅಶ್ಲೀಲ ಮತ್ತು ಕೊಲೆ ಬೆದರಿಕೆ ಪದಗಳನ್ನು ಬರೆದಿರುವ ಕುರಿತಾಗಿ ಪ್ರಕರಣ ದಾಖಲಾಗಿತ್ತು. 



ಆರೋಪಿಗಳನ್ನು ಪತ್ತೆ ಮಾಡುವ ಸಲುವಾಗಿ ಕಡೂರು PSI ರಮ್ಯ ಅವರ ನೇತೃತ್ವದಲ್ಲಿ ರಚಿಸಿದ ಪೊಲೀಸ್ ತಂಡ ಸಾಂಧರ್ಬಿಕ ಸಾಕ್ಷ್ಯಗಳ ಆಧಾರದ ಮೇರೆಗೆ 48 ಗಂಟೆಯೊಳಗಾಗಿ ಈ ಕೃತ್ಯವನ್ನು ಎಸಗಿದ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರನ್ನು ಪತ್ತೆ ಮಾಡಿದ್ದಾರೆ. 

ಕೃತ್ಯ ಎಸಗಿರುವ ಇಬ್ಬರು ಬಾಲಕರು ದಿನಾಂಕ 24.09.2022 ರಂದು ರಾತ್ರಿ ಕಡೂರಿನಲ್ಲಿ ಆರ್ಕೆಸ್ಟ್ರಾ ಕಾರ್ಯಕ್ರಮ ನೋಡಿಕೊಂಡು ವಾಪಸ್ ತೆರಳುತ್ತಿದ್ದಾಗ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಕಾರು ಚೆನ್ನಾಗಿದ್ದು, ನಾವು ಈ ರೀತಿಯ ಕಾರನ್ನುಕೊಳ್ಳಲು ಆಗುವುದಿಲ್ಲ, ಆಗದಿದ್ದರೂ ಪರವಾಗಿಲ್ಲ, ಇದನ್ನು ಹಾಳುಮಾಡೋಣವೆಂದು ಈ ಕೃತ್ಯವನ್ನು ಎಸಗಿರುವುದು ಕಂಡು ಬಂದಿದ್ದು ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.