ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಎರಡು ದಿನಗಳ ಕಾಲ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಇದನ್ನೂ ಓದಿ: ಶಿವಮೊಗ್ಗ: ಚಲಿಸುತ್ತಿದ್ದ ರೈಲನ್ನು ಹತ್ತಲು ಓಡೋಡಿ ಹೋದ ತಂದೆ ಮಗನ ದುರ್ಮರಣ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಸಾಕಷ್ಟು ತಗ್ಗಲಿದೆ ಎಂಬುದಾಗಿಯೂ ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 


ಇದರ ಜೊತೆಯಲ್ಲೇ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದೆ.

ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಗೆ ಆದರೆ ಇಂದು ಮತ್ತು ನಾಳೆ ಯೆಲ್ಲೋ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.