ಚಿಕ್ಕಮಗಳೂರು: ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆ ವ್ಯಾಪಕವಾದ ಭದ್ರತೆ ಹಾಗೂ ವ್ಯವಸ್ಥೆಗಳನ್ನು ಸರ್ಕಾರ ಕಲ್ಪಿಸಿದ್ದು, ಕೆಲವು ಆದೇಶಗಳಿಂದಾಗಿ ಸಾರ್ವಜನಿಕರಿಗೆ ಸಮಸ್ಯೆ ತಲೆದೋರಿದೆ ಎಂಬ ಮಾತುಗಳು ಸಹ ಕೇಳಿ ಬಂದಿದೆ.
ಕಡಲ ಕಿನಾರೆ ಮಂಗಳೂರಿಗೆ ಪ್ರಧಾನಿ ನರೇಂದ್ರಮೋದಿ ಭೇಟಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮಾರ್ಗದಿಂದ ಮಂಗಳೂರು ಮಾರ್ಗ-ಮಂಗಳೂರು ಮಾರ್ಗದಿಂದ ಚಿಕ್ಕಮಗಳೂರು ಸಂಚರಿಸುವ KSRTC ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಸರ್ಕಾರಿ ಬಸ್ಸುಗಳನ್ನು ಅವಲಂಬಿಸಿಕೊಂಡು ಸಂಚರಿಸುವ ಸಾರ್ವಜನಿಕರು, ರೋಗಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಕಾಯುವ ಪರಿಸ್ಥಿತಿ ಉಂಟಾಗಿದೆ ಎಂದು ಸಾರ್ವಜನಿಕರು ಸಮಸ್ಯೆಯ ಕುರಿತು ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ಅಧಿಕಾರಿಗಳು ಯಾವುದೇ ಪ್ರಕಟಣೆಯಲ್ಲಿ ಈ ಕುರಿತಾಗಿ ತಿಳಿಸಿಲ್ಲ, ಬಸ್ ಸಂಚಾರ ಇಲ್ಲದ ಪರಿಣಾಮ ಓಡಾಡಲು ತೀವ್ರತರಹದ ಸಮಸ್ಯೆ ಎದುರಾಗಿದೆ - ಅಮೃತ, ಬಿಸಿಎ ವಿದ್ಯಾರ್ಥಿನಿ.
ಚಿಕ್ಕಮಗಳೂರು, ಮೂಡಿಗೆರೆ, ಕೊಟ್ಟಿಗೆಹಾರ ಮಾರ್ಗದಿಂದ ಸಂಚರಿಸುವ KSRTC ಬಸ್ಸುಗಳ ಸಂಚಾರವನ್ನು ಬೆಳಿಗ್ಗೆ 06 ರಿಂದ ಸಂಜೆ 06 ರ ವರೆಗೆ ಸ್ಥಗಿತಗೊಳಿಸಲಾಗಿದ್ದು ಮುಂಚೆಯೇ ಪ್ರಕಟಣೆಯನ್ನು ಹೊರಡಿಸಿಲ್ಲ, ಜನರಲ್ಲಿ ಈ ಕುರಿತು ಮುಂಚಿನದಾಗಿ ತಿಳಿಸಿದ್ದರೆ ಅನುಕೂಲಕರವಾಗುತ್ತಿತ್ತು ಎಂದು ಸಾರ್ವಜನಿಕರು ಆಕ್ರೋಶವನ್ನು ಹೊರಹಾಕಿದ್ದಾರೆ.
- ತನು ಕೊಟ್ಟಿಗೆಹಾರ, ವರದಿಗಾರರು


%20-%20Copy.jpeg)


0 Comments