ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಕ್ರಮ ಹಣ ವರ್ಗಾವಣೆ ಹಾಗೂ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ SDPI ಹಾಗೂ PFI ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರನ್ನು NIA ಅಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆಯುತ್ತಿದ್ದು ಇಂದು ಚಿಕ್ಕಮಗಳೂರು ನಗರದಲ್ಲೂ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರಿನ SDPI ಜಿಲ್ಲಾಧ್ಯಕ್ಷ ಗೌಸ್ ಮುನೀರ್ ಹಾಗೂ ಅವರ ಮಗ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದ ಜಿಲ್ಲಾಧ್ಯಕ್ಷ ಇಮ್ರಾನ್ ಸೇರಿದಂತೆ ಕೆಲವರನ್ನು ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. 

ಇದನ್ನೂ ಓದಿ: N.R PURA: ರಾತ್ರೋ ರಾತ್ರಿ ಬಂದೂಕಿನಿಂದ ಹಾರಿದ ಗುಂಡು; ವಿವಾಹಿತ ಯುವಕನ ದುರ್ಮರಣ 

ರಾಜ್ಯದ ಅನೇಕ ಕಡೆಗಳಲ್ಲಿ NIA ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದು, ಯಾವುದೇ ರೀತಿಯ ಪ್ರತಿಭಟನೆಗಳು ನಡೆಯದ ರೀತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ SDPI, PFI ಪ್ರಮುಖರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಶಾಂತಿಭಂಗ ಹಿನ್ನೆಲೆ ವಶಕ್ಕೆ; ಗೃಹಸಚಿವ ಆರಗಜ್ಞಾನೇಂದ್ರ 

ಈ ಹಿಂದೆ NIA ದಾಳಿ ನಡೆಸಿದಾಗ ಮತ್ತು ಟೆರರಿಸ್ಟ್ ಗಳ ಮನೆಗಳ ಮೇಲೆ ದಾಳಿ ನಡೆದಾಗ ಸಮಾಜದಲ್ಲಿ ಆತಂಕ ಉಂಟುಮಾಡಿದ ಹಿನ್ನೆಲೆ, ಶಾಂತಿಭಂಗ ಮಾಡುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆಯಿಂದಲೇ ರಾಜ್ಯದಾದ್ಯಂತ PFI ಸಂಘಟನೆಯ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದು ತಹಸೀಲ್ದಾರರ ಮುಂದೆ ಹಾಜರುಪಡಿಸುತ್ತಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಆರಗಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಮೂಡಿಗೆರೆ, ಆಲ್ದೂರು ಭಾಗಗಳ 10ಕ್ಕೂ ಅಧಿಕ SDPI, PFI ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ, ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ | 7 ಜನರ ಬಂಧನ; ಇಬ್ಬರು ಎಸ್ಕೇಪ್ :

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳ ಸಹಿತ ನಗದನ್ನು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ನಗರದಕೋಟೆಯ ಮೂರುಮನೆ ಹಳ್ಳಿಯಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಚಿಕ್ಕಮಗಳೂರು ಪೊಲೀಸರು 7 ಜನ ಆರೋಪಿಗಳು ಮತ್ತು 33,430 ರೂಪಾಯಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು ಒಂಭತ್ತು ಜನ ಆರೋಪಿಗಳು ಜೂಜಾಟದಲ್ಲಿ ತೊಡಗಿದ್ದು ದಾಳಿಯ ವೇಳೆ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. 



ಬಂಧಿತರನ್ನು ಸಿ.ಎನ್ ಚಂದ್ರಶೇಖರ್, ಸಿ.ಎಂ ವಿನಯ್ ಕುಮಾರ್, ಸಿ.ಎಸ್ ಹರೀಶ, ಅಶ್ವಥ್, ರಾಕೇಶ್, ರಕ್ಷಿತ್, ರಂಜಿತ್ ಕುಮಾರ್, ಕೆ.ಪಿ ನಟರಾಜ್ ಎಂದು ಗುರುತಿಸಲಾಗಿದೆ. 

ಈ ಕಾರ್ಯಾಚರಣೆಯನ್ನು ಚಿಕ್ಕಮಗಳೂರು ನಗರದ ಪಿ.ಎಸ್.ಐ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳು ನಡೆಸಿದ್ದಾರೆ.