ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜೀಪ್ ಹಾಗೂ ಕಾರಿನ ನಡುವೆ ಮುಖಾಮುಖಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಚಿಕ್ಕಮಗಳೂರಿನ ನಿವಾಸಿಗಳಾದ ಕಾವ್ಯಾ, ಲಾವಣ್ಯ ಹಾಗೂ ನಾಲ್ವರು ಮಕ್ಕಳು ನಿನ್ನೆ ಸಂಜೆಯ ವೇಳೆ ಕಾರಿನಲ್ಲಿ ಬೇಲೂರಿನ ಕಡೆಗೆ ತೆರಳುತ್ತಿದ್ದಾಗ ಬೇಲೂರು ಕಡೆಯಿಂದ ಚಿಕ್ಕಮಗಳೂರಿನ ಕಡೆಗೆ ತೆರಳುತ್ತಿದ್ದ ತೆರಳುತ್ತಿದ್ದ ಜೀಪ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಮಹಿಳೆ ಕಾವ್ಯ ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರ ಗಾಯಗಳಿಗೆ ತುತ್ತಾಗಿದ್ದಾರೆ. ಗಾಯಾಳುಗಳಿಗೆ ಬೇಲೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಿ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣ ಹಾಸನದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಮುಂದಿನ ಕ್ರಮಕ್ಕೆ ಅನುವು ಮಾಡಿದ್ದಾರೆ. ಮೃತರನ್ನು ಕಳೆದುಕೊಂಡ ಮನೆಯವರು ಅತೀವವಾದ ದುಃಖವನ್ನು ವ್ಯಕ್ತಪಡಿಸಿದ್ದಾರೆ.






0 Comments