ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಮುಖರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ಪಾದಯಾತ್ರೆಯ ಸಂದರ್ಭದಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ನಡೆದಿದೆ. 

ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ರಮೇಶ್ (38) ಎಂಬುವವರಿಗೆ ಮೂಡಿಗೆರೆ ಭಾಗದ ಕಾಂಗ್ರೆಸ್ ಕಾರ್ಯಕರ್ತರನ್ನು ಕರೆತಂದಿದ್ದ ಖಾಸಗೀ ಬಸ್ ಗುದ್ದಿದ ಪರಿಣಾಮ ಸ್ಥಳದಲ್ಲೇ ಕಾಂಗ್ರೆಸ್ ಕಾರ್ಯಕರ್ತ ರಮೇಶ್ ಮೃತಪಟ್ಟಿದ್ದಾರೆ. ಇವರು ಸಾಗರ ವಿಧಾನಸಭಾ ಕ್ಷೇತ್ರದಿಂದ ಪಾದಯಾತ್ರೆಗೆ ಆಗಮಿಸಿದ್ದರು ಎನ್ನಲಾಗಿದೆ. 


ಚಿತ್ರದುರ್ಗದ ಹಿರಿಯೂರಿನ ಕೋರ್ಟ್‌ ಸಮೀಪ ರಸ್ತೆ ದಾಟುವ ವೇಳೆ ಪಾದಯಾತ್ರೆಗೆ ಜನರನ್ನು ಕರೆತಂದಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದು, ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿಕ್ಕಮಗಳೂರು: ಈದ್ ಮಿಲಾದ್ ಹೆಸರಿನಲ್ಲಿ ಸಮಾಜಕ್ಕೆ ಸಮಸ್ಯೆ ಮಾಡಲಾಗಿದೆ; ಭಜರಂಗದಳ ಖಂಡನೆ

ಮುಸಲ್ಮಾನರು ಆಚರಿಸಿದ ಈದ್ ಮಿಲಾದ್ ಹಬ್ಬದಲ್ಲಿ ಸಮಾಜಕ್ಕೆ ಸಮಸ್ಯೆ ಮಾಡಲಾಗಿದೆ, ಈ ಸಮಸ್ಯೆಗಳನ್ನು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುಬೇಕೆಂದು ಬಜರಂಗದಳದ ಪ್ರಾಂತ ಸಹ ಸಂಯೋಜಕ ರಘು ಸಕಲೇಶಪುರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಿಕ್ಕಮಗಳೂರು ನಗರದಲ್ಲಿ ಈದ್ ಮಿಲಾದ್ ಹೆಸರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ, ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಗ್ರಹಿಸಿದೆ. 

ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಿದ ಪರಿಣಾಮ ಪ್ರವಾಸಿಗರಿಗೆ ಇದರಿಂದ ಸಮಸ್ಯೆ ಉಂಟಾಗಿತ್ತು, ಶೃಂಗೇರಿ, ಹೊರನಾಡು, ಕಳಸ, ದೇವೀರಮ್ಮ ದೇವಸ್ಥಾನಗಳಿಗೆ ತೆರಳುವವರಿಗೆ ದೇವಸ್ಥಾನಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ, ಅನೇಕರು ಊಟ ತಿಂಡಿ ಸಿಗದೇ ಪರದಾಡಿದ್ದಾರೆ, ಸಮಸ್ಯೆ ಉಂಟುಮಾಡಿರುವವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. 



ಇದಲ್ಲದೇ ಚಿಕ್ಕಮಗಳೂರಿನ ಬಸ್ ನಿಲ್ದಾಣವನ್ನು ಜಿಲ್ಲಾ ಕ್ರೀಡಾಂಗಣಕ್ಕೆ ಬದಲಿಸಿ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಮಾಡಲಾಗಿದೆ ಎಂದು ಆರೋಪಿಸಿರುವ ಅವರು ಇದರಲ್ಲಿ ಪೊಲೀಸ್ ಇಲಾಖೆ ಹಾಗೂ ಆಡಳಿತ ಕೂಡ ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದೆ ಇದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದೆ.