ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿಇಓ ಸೆರೆಸಿಕ್ಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಬಿಇಓ 15 ಸಾವಿರ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಇದನ್ನೂ ಓದಿ: ಚಿಕ್ಕಮಗಳೂರು: ಪತ್ನಿಯನ್ನು ಹತ್ಯೆಗೈದು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಯ ಶಿಕ್ಷೆಯನ್ನು ರದ್ದುಗೊಳಿಸಿದ ಹೈಕೋರ್ಟ್
ಕಡೂರು ತಾಲೂಕಿನ ಜಿ.ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮೇರೆಗೆ ಶಿಕ್ಷಕರಾಗಿದ್ದ ರಾಜಪ್ಪ ಅವರನ್ನು ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆ ಮಾಡಲು ಬಿಇಓ 15 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಮಂಗಳವಾರ ಮಧ್ಯಾಹ್ನ ಜಿ.ತಿಮ್ಮಾಪುರ ಗೇಟ್ ಬಳಿ ಹಣವನ್ನು ಪಡೆಯುವಾಗ ಲೋಕಾಯುಕ್ತ ಡಿ.ವೈ.ಎಸ್.ಪಿ ತಿರುಮಲೇಶ್ ಹಾಗೂ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ನಿನ್ನೆ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಿ.ತಿಮ್ಮಾಪುರ ಗೇಟ್‍ನಲ್ಲಿ 15 ಸಾವಿರ ಲಂಚ ನೀಡುವಾಗ ಸಿಕ್ಕಿಬಿದ್ದಿದ್ದಾರೆ.
ನಿನ್ನೆ ಸಂಜೆಯವರೆಗೂ ವಿಚಾರಣೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ನಂತರ ಬಿಇಓ ಕೆ.ಎನ್.ರಾಜಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ದಾಳಿಯಲ್ಲಿ ವೃತ್ತ ನಿರೀಕ್ಷಕರಾದ ಸಚಿನ್ ಮತ್ತು ಬಿ. ಮಲ್ಲಿಕಾರ್ಜುನ್ ಸಿಬ್ಬಂದಿಗಳಾದ ಚೇತನ್, ಸಲೀಂ, ಲೋಕೇಶ್, ವಿಜಯಭಾಸ್ಕರ್, ಸವಿನಯ, ರವಿಚಂದ್ರ ಇದ್ದರು.
ತನು ಕೊಟ್ಟಿಗೆಹಾರ, ವರದಿಗಾರರು
ಕಾಫಿ ತೋಟದಲ್ಲಿ ಚಿರತೆ ಪ್ರತ್ಯಕ್ಷ, ಸೆರೆ ಹಿಡಿದ ಅರಣ್ಯ ಇಲಾಖೆ
ಮೂಡಿಗೆರೆ: ಕಾಫಿ ತೋಟದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರ ಮಾಹಿತಿ ಮೇರೆಗೆ ಅದನ್ನು ಸೆರೆ ಹಿಡಿದ ಘಟನೆ ಮೂಡಿಗೆರೆ ತಾಲೂಕಿನ ದೇವೃಂದ ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆಯ ದೇವೃಂದ ರಮೇಶ್ ಅವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿತ್ತು.
ಅರಣ್ಯ ಇಲಾಖೆಯ ತಂಡವು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ ಮೂಡಿಗೆರೆ ಭಾಗದ ಅನೇಕ ಕಡೆಗಳಲ್ಲಿ ಚಿರತೆಯು ದಾಳಿ ನಡೆಸಿ ಅನೇಕ ಹಸುಗಳನ್ನು ಬಲಿ ತೆಗೆದುಕೊಂಡಿತ್ತು. ಸದಾ ಆತಂಕದಿಂದ ಕೂಡಿರುತ್ತಿದ್ದ ಗ್ರಾಮಸ್ಥರು ಚಿರತೆ ಬಲೆಗೆ ಬಿದ್ದಿರುವುದರಿಂದ ಕೊಂಚ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.
- ತನು ಕೊಟ್ಟಿಗೆಹಾರ, ವರದಿಗಾರರು









0 Comments