ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದ ಅಭಿವೃದ್ಧಿಗೆ ಅರಣ್ಯ ಇಲಾಖೆಯ ನಿಯಮಾವಳಿಗಳು ನಿಬಂಧನೆಗಳು ಅಡ್ಡಿಪಡಿಸುತ್ತಿದೆ ಎಂದು ಶಾಸಕ ಟಿ.ಡಿ ರಾಜೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಗಳಾದ ಸುಂಕದಮಕ್ಕಿ, ಹರೇಬೀಳು ಗ್ರಾಮಗಳಿಗೆ ಅತ್ಯಾವಶ್ಯಕವಾಗಿರುವ ಸೇತುವೆ ಅಥವಾ ಕಾಲುಸಂಕಗಳ ನಿರ್ಮಾಣಕ್ಕೆ ಅದರ ಅಭಿವೃದ್ಧಿಗೆ ಅರಣ್ಯ ಇಲಾಖೆ ಅನುಮತಿ ನೀಡುತ್ತಿಲ್ಲ, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಸಿಗುವ ಸೇತುವೆಗಳ ಅಭಿವೃದ್ಧಿಗೆ ಸರ್ಕಾರದಿಂದ ಯಾವುದೇ ಅನುದಾನಗಳು ಸರ್ಕಾರದಿಂದ ಲಭಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

ಇದನ್ನೂ ಓದಿ: ಹಾಡಹಗಲೇ 5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ನಗದನ್ನು ಕದ್ದೊಯ್ದ ಖದೀಮರು :


 ಅರಣ್ಯ ಇಲಾಖೆಯಿಂದ ಮಲೆನಾಡಿನ ಜನರ ಮೇಲೆ ನಡೆಯುತ್ತಿರುವ ಧೋರಣೆಯನ್ನು ಅರಣ್ಯ ಇಲಾಖೆಯ ನಿಯಮಾವಳಿಗಳಿಂದ ಆಗುತ್ತಿರುವ ತೊಡಕುಗಳ ಕುರಿತು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಅವರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜು ಅವರಿಗೆ ಈ ಕುರಿತು ತಿಳಿಸಲಾಗಿದ್ದು, ವಿಶೇಷವಾದ ಸಭೆಯನ್ನು ನಡೆಸಿ ಈ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಭರವಸೆ ನೀಡಿದ್ದಾರೆ ಎಂದರು. ಅಂತೆಯೇ ಸೂಕ್ತವಾದ ಪರಿಹಾರ ಹಾಗೂ ಅಭಿವೃದ್ದಿ ಕುರಿತು ಯಾವುದೇ ಪ್ರಕ್ರಿಯೆಗಳು ಮುಂದುವರೆಯದೆ ಹೋದಲ್ಲಿ ಅರಣ್ಯ ಇಲಾಖೆ ವಿರುದ್ಧ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಸಿದರು. 

ಈ ಕುರಿತು ಸರ್ಕಾರವನ್ನು ಮುಂದಿನ ಅಧಿವೇಶನದಲ್ಲಿ ಎಚ್ಚರಿಸುವುದಾಗಿ ಶಾಸಕರು ತಿಳಿಸಿದ್ದು, ಬಿಡುಗಡೆಯಾಗಿರುವ ಅನುದಾನದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಅವಧಿಯಲ್ಲಿ ಕಾಲುಸಂಕ ನಿರ್ಮಾಣಕ್ಕೆ 13 ಕೋಟಿ ಬಿಡುಗಡೆ ಮಾಡಲಾಗಿತ್ತು ಆದರೆ ಈಗಿನ ಸರ್ಕಾರ ಐದುಕೋಟಿ ಹಣ ಬಿಡುಗಡೆ ಮಾಡಿದೆ, ಈ ಅನುದಾನದಿಂದ ಅವಶ್ಯಕವಿರುವ ಕೆಲ ಗ್ರಾಮಗಳಲ್ಲಿ ಕಾಲುಸಂಕವನ್ನು ನಿರ್ಮಾಣ ಮಾಡಲಾಗಿದೆ ಎಂದರು.