ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾವಿನಹೊಳೆ ಗ್ರಾಮದ ಮಾಜಿ ಸೈನಿಕ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಕೃಷಿಯಲ್ಲಿ ತೊಡಗಿಕೊಂಡಿದ್ದ ಅಪ್ಪಟ ದೇಶಪ್ರೇಮಿ ಮಾಜಿಯೋಧ ಚೆನ್ನಪ್ಪ ಅವರು ತಡರಾತ್ರಿ ಶಿವಮೊಗ್ಗ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತ ಚೆನ್ನಪ್ಪ ಬೆಂಗಳೂರು ನಿಂದ ಶಿವಮೊಗ್ಗ ಕ್ಕೆ ಕ್ರೀಡಾಕೂಟ ಸಲುವಾಗಿ ಬೆಂಗಳೂರಿಗೆ ಹೋಗಿದ್ದ ಪುತ್ರಿಯನ್ನು ವಾಪಾಸ್ ಕರೆತರುವ ಮಾರ್ಗಮಧ್ಯೆ ಶಿವಮೊಗ್ಗ ಸಮೀಪ ತಮ್ಮ ಮಾರುತಿ 800 ಆಲ್ಟೊ ಕಾರು ಅಪಘಾತಕ್ಕೀಡಾಗಿದ್ದು, ಈ ದುರ್ಘಟನೆಯಲ್ಲಿ ಮಾಜಿ ಯೋಧ ಚೆನ್ನಪ್ಪ ಅವರು ಮೃತರಾಗಿದ್ದು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸೈನಿಕನ ಪತ್ನಿ ಹಾಗೂ ಪುತ್ರಿ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ಪುತ್ರಿ ಹಾಗೂ ಪತ್ನಿಯನ್ನು ಹತ್ತಿರದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮೃತರ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು ಮಾವಿನಹೊಳೆ ಗ್ರಾಮದ ಜನರು ಅತೀವ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಚಿಕ್ಕಮಗಳೂರು; ಭಾರತ್ ಜೋಡೋ ಯಾತ್ರೆಯಲ್ಲಿ ಪುನರುಚ್ಚರಿಸಿದ ರಾಹುಲ್ ಗಾಂಧಿ
ಚಿಕ್ಕಮಗಳೂರು: ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಇಂದು ಮತ್ತೆ ಇಂದಿರಾಗಾಂಧಿ ಅವರಿಗೆ ರಾಜಕೀಯವಾಗಿ ಪುನರ್ ಜನ್ಮನೀಡಿದ ಕಾಫಿನಾಡು ಚಿಕ್ಕಮಗಳೂರಿನ ಕುರಿತು ಮಾತನಾಡಿದ್ದಾರೆ ಹಾಗೂ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು 1000 ಕಿಮೀ ಪೂರೈಸಿದ್ದು ಈ ವೇಳೆ ಅನೇಕ ನಾಯಕರು ಹಾಗೂ ಕಾಂಗ್ರೆಸ್ ಮುಖಂಡರುಗಳು ಬಳ್ಳಾರಿಯಲ್ಲಿ ಉಪಸ್ಥಿತರಿದ್ದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಕಾರ್ಯಕ್ರಮದಲ್ಲಿ ರಾಜಸ್ಥಾನದ ಸಿ.ಎಂ ಅಶೋಕ್ ಗೆಹ್ಲೋಟ್ ಮಾತನಾಡಿ ಇಂದಿರಾ ಗಾಂಧಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದರು. ಇಂದು ಯಾತ್ರೆ 1,000 ಕಿಲೋ ಮೀಟರ್ ಪೂರ್ಣಗೊಂಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಚಿಕ್ಕಮಗಳೂರಿನಲ್ಲಿ ಇಂದಿರಾ ಗಾಂಧಿ ಚುನಾವಣೆಗೆ ಸ್ಪರ್ಧಿಸಿದ್ರು. ಆಗ ನಾವೆಲ್ಲಾ ಪ್ರಚಾರಕ್ಕಾಗಿ ಚಿಕ್ಕಮಗಳೂರಿಗೆ ಬಂದಿದ್ದೆವು. ಅಭೂತಪೂರ್ವ ಮತಗಳಿಂದ ಅವರನ್ನು ಗೆಲ್ಲಿಸಿ ಕಳಿಸಿದ್ದೀರಿ ಎಂದು ಇಂದಿರಾ ಗಾಂಧಿ ಅವರ ಚುನಾವಣೆ ಸಂದರ್ಭವನ್ನು ನೆನಪಿಸಿಕೊಂಡರು. ದೇಶದಲ್ಲಿ ಇಂದು ಸಂವಿಧಾನವನ್ನು ಲೇವಡಿ ಮಾಡಲಾಗುತ್ತಿದೆ. ಸಮಾಜದಲ್ಲಿ ಜಾತಿಯ ವಿಷಬೀಜಗಳನ್ನು ಬಿತ್ತಲಾಗುತ್ತಿದೆ. ಇದನ್ನೆಲ್ಲವೂ ಕಿತ್ತಿ ಒಗೆಯೋದಕ್ಕೆ ಜೋಡೋ ಪಾದಯಾತ್ರೆ ನಡೆದಿದೆ. ದೇಶದಲ್ಲಿ ಹಿಂಸೆಯ ವಾತಾವರಣ ಇದೆ. ಈ ದೇಶದಲ್ಲಿ ಭಾತೃತ್ವದ ವಾತಾವರಣ ನಿರ್ಮಾಣ ಆಗಬೇಕು. ಇಂದಿರಾ ಗಾಂಧಿಯವರು ದೇಶಕ್ಕಾಗಿ ಪ್ರಾಣ ಕೊಟ್ಟರು. ಮುಂದಿನ ದಿನ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
1000 ಕಿಮೀ ಪೂರೈಸಿದ ಯಾತ್ರೆ:
ಇಂದು 1 ಸಾವಿರ ಕಿಲೋಮೀಟರ್ ಪೂರ್ಣಗೊಳಿಸಿದ್ದೇವೆ. ಕಳೆದ 2 ವರ್ಷದಿಂದ ಸಹಕರಿಸಿದ ಎಲ್ಲರಿಗೂ ನಮಸ್ಕಾರಗಳು. ಯಾತ್ರೆಗೆ ಸೋನಿಯಾ ಗಾಂಧಿ ಬಂದು ದಸರಾ ಆಚರಿಸಿದ್ದಾರೆ. ಸೋನಿಯಾ ಗಾಂಧಿ ಭಾಗಿಯಾಗಿ ನಮಗೆಲ್ಲ ಶಕ್ತಿ ನೀಡಿದ್ದಾರೆ. ಅದೊಂದು ಐತಿಹಾಸಿಕ ಹೆಜ್ಜೆ. ನಮ್ಮ ರಾಜ್ಯದ ಪಾಲಿಗೆ ಇದೊಂದು ಸುವರ್ಣ ಅವಕಾಶ. ಈ ಯಾತ್ರೆ 150 ಸ್ಥಾನಗಳನ್ನ ಗೆಲ್ಲಲು ನೆರವಾಗುತ್ತೆ. ಈ ಪಾದಯಾತ್ರೆ ಖರ್ಗೆ, ಡಿಕೆಶಿ ಸಿಎಂ ಆಗುವುದಕ್ಕೆ ಅಲ್ಲ. ನಿಮ್ಮ ಹೆಜ್ಜೆ ದೇಶಕ್ಕೊಂದು ಕೊಡುಗೆ. ಈ ಹೆಜ್ಜೆ ರೈತರ ಬದುಕು, ಉದ್ಯೋಗದ ಸೃಷ್ಟಿಗೆ. ಬಿಜೆಪಿ ತೊಲಗಿಸಲು ನೀವು ಕಾರಣರಾಗಬೇಕು. ವಾಗ್ಧಾನ ನಮ್ಮದು ವಿಶ್ವಾಸ ನಿಮ್ಮದು ಎಂದು ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಕೊಟ್ಟರು.
ನಮ್ಮ ಅಜ್ಜಿಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಕರ್ನಾಟಕ, ಚಿಕ್ಕಮಗಳೂರಿನ ಜನರು ಇಂದಿರಾ ಗಾಂಧಿಯವರನ್ನು ಗೆಲ್ಲಿಸಿದ್ರು. ನಮ್ಮ ತಾಯಿ ಸೋನಿಯಾರನ್ನು ಬಳ್ಳಾರಿ ಜನ ಗೆಲ್ಲಿಸಿದ್ರು. ಕರ್ನಾಟಕದ ಜನತೆಗೆ ನನ್ನ ಧನ್ಯವಾದಗಳು ಪಕ್ಷವನ್ನು ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುವಲ್ಲಿ ರಾಹುಲ್ ಗಾಂಧಿ ಧನ್ಯವಾದ ತಿಳಿಸಿದರು.









0 Comments