ಹಾಸನ: (ನ್ಯೂಸ್ ಮಲ್ನಾಡ್ ವರದಿ) ಮಿನಿ ಪಾಕಿಸ್ತಾನ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದ ಕಿಡಿಗೇಡಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನ ಫೇಸ್ಬುಕ್ ಅಕೌಂಟ್ ನಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಜೀಪ್ ಹಾಗೂ ಕಾರ್ ನ ನಡುವೆ ಮುಖಾಮುಖಿ ರಸ್ತೆ ಅಪಘಾತ; ಸ್ಥಳದಲ್ಲೇ ಚಿಕ್ಕಮಗಳೂರು ಮೂಲದ ಮಹಿಳೆ ಸಾವು
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ನೇಮನ್ (20) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಮರು ಹೆಚ್ಚಿರುವ ಚನ್ನರಾಯಪಟ್ಟಣದ ಬಾಗೂರು ರಸ್ತೆಯುದ್ದಕ್ಕೂ ಬಣ್ಣದ ತೋರಣಗಳನ್ನು ಕಟ್ಟಿ ವಿದ್ಯುತ್ ದೀಪಗಳಿಂದ ಮುಸ್ಲಿಮರು ಅಲಂಕಾರ ಮಾಡಿದ್ದರು.
ವೆಲ್ಡಿಂಗ್ ಕೆಲಸ ಮಾಡುವ ನೇಮನ್ ಬಾಗೂರು ರಸ್ತೆ ಮಿನಿ ಪಾಕಿಸ್ತಾನ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಹಾಕಿದ್ದ. ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ನೇಮನ್ ನ್ನು ಚನ್ನರಾಯಪಟ್ಟಣ ನಗರಠಾಣೆ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.






0 Comments