ಕೊಡಗು: (ನ್ಯೂಸ್ ಮಲ್ನಾಡ್ ವರದಿ) ತಲಕಾವೇರಿ ತೀರ್ಥೋದ್ಭವದ ಅಂಗವಾಗಿ ಏಳು ಕಿ.ಮೀ ವ್ಯಾಪ್ತಿ ಸ್ವಚ್ಛತಾ ಕಾರ್ಯಕ್ರಮ ಇಂದು ಮಹಿಳಾ ಮೋರ್ಚಾದ ವತಿಯಿಂದ ನಡೆಯಿತು.

ಈ ಸ್ವಚ್ಛತಾ ಕಾರ್ಯಕ್ರಮಕ್ಕೆ ಪಶ್ಚಿಮ ಘಟ್ಟಗಳ ಕಾರ್ಯಪಡೆ ಮಾಜಿ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ತಲಕಾವೇರಿಯಲ್ಲಿ ಚಾಲನೆ ನೀಡಿದರು. 

ಇದನ್ನೂ ಓದಿ: ಕೊಪ್ಪ: ಕಾಂತಾರ ಸಿನಿಮಾ ವೀಕ್ಷಣೆ ವೇಳೆ ಕ್ಷುಲ್ಲಕ ಕಾರಣಕ್ಕೆ ಕಿರಿಕ್



ತಲಕಾವೇರಿಯಿಂದ ಭಾಗಮಂಡಲದ 7 ಕಿ.ಮೀ ವ್ಯಾಪ್ತಿಗೆ ಸ್ವಚ್ಛತಾ ಕಾರ್ಯವನ್ನು ನಡೆಸಿದ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಸವನ್ನು ಸಂಗ್ರಹಿಸಿ ಹಾದಿಯನ್ನು ಸಂಪೂರ್ಣ ಸ್ವಚ್ಛಗೊಳಿಸಿದರು.

ಈ ಕಾರ್ಯಕ್ರಮಕ್ಕೆ ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ವಾಹನ ವ್ಯವಸ್ಥೆಯನ್ನು ಕಲ್ಪಿಸಿದ್ದರು. ಧಾರ್ಮಿಕ ಭಾವನೆ ಹಾಗೂ ನಂಬಿಕೆಯನ್ನು ಹೊಂದಿರುವ ತಲಕಾವೇರಿ ಕ್ಷೇತ್ರವನ್ನು ಕೊಡವರು ಮಾತ್ರವಲ್ಲದೆ ದಕ್ಷಿಣ ಭಾರತದ ಅನೇಕ ಜನರು ನಂಬಿಕೆಯುಳ್ಳವರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಿರಾಜಪೇಟೆ ತಾಲೂಕಿನ ಮಹಿಳಾ ಮೋರ್ಚಾದ ಅಧ್ಯಕ್ಷೆ ಕವಿತಾ ಬೋಜಪ್ಪ, ಪ್ರಧಾನ ಕಾರ್ಯದರ್ಶಿ ಶಿಲ್ಪ, ರತಿ ಅಚ್ಚಪ್ಪ, ರಾಜ್ಯದ ಕೃಷಿ ಮೋರ್ಚದ ಸದಸ್ಯೆ ಯಮುನಾ ಚಂಗಪ್ಪ, ಜಿಲ್ಲಾ ಮಹಿಳಾ ಮೋರ್ಚಾದ ಸದಸ್ಯೆ ಸುಶೀಲಾ ಅಶೋಕ್, ಮಹಿಳಾ ಮೋರ್ಚಾದ ಸದಸ್ಯೆಯರು ಇದ್ದರು. ಮಡಿಕೇರಿ ಮೂಡಾ ಅಧ್ಯಕ್ಷ ರಮೇಶ್ ಹೊಳ್ಳ, ಯಮುನಾ ಚಂಗಪ್ಪ, ಅಯ್ಯಂಗೇರಿ ಗ್ರಾ.ಪಂ. ಅಧ್ಯಕ್ಷ ಕುಯ್ಯಮುಡಿ ರಂಜು, ಶಕ್ತಿ ಕೇಂದ್ರ ಪ್ರಮುಖ ರಾಜೀವ್, ಎಸ್ಟಿ ಮೋರ್ಚಾದ ಅಧ್ಯಕ್ಷ ಮಿಟ್ಟು ರಂಜಿತ್, ಸೇರಿದಂತೆ ಮೊದಲಾದವರು ಭಾಗವಹಿಸಿ ಸ್ವಚ್ಛತೆಯಲ್ಲಿ ಭಾಗವಹಿಸಿದ್ದರು.