ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಹಿಂದು ಜನಜಾಗೃತಿ ಸಮಿತಿ, ಮಾವಿನಕಟ್ಟೆ ವತಿಯಿಂದ ನಾಳೆ ದಿನಾಂಕ 04 ಅಕ್ಟೋಬರ್ 2022ರಂದು ಮದ್ಯಾಹ್ನ 3 ಗಂಟೆಗೆ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮಾವಿನಕಟ್ಟೆಯ ಜಟಿಗೇಶ್ವರ ಸ್ವಾಮಿ ದೇವಸ್ಥಾನದಿಂದ ಬೃಹತ್ ಶೋಭಾಯಾತ್ರೆ ಪ್ರಾರಂಭವಾಗಿ ಮಾವಿನಕಟ್ಟೆ ಸಭಾಭವನದಲ್ಲಿ ಸಮಾವೇಶದ ಜರುಗಲಿದೆ.

ದಿಕ್ಸೂಚಿ ಭಾಷಣಕಾರರಾಗಿ ಚೈತ್ರ ಕುಂದಾಪುರ ಆಗಮಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಬಾಂಧವರು ಆಗಮಿಸುವಂತೆ ಮಾವಿನಕಟ್ಟೆ ಹಿಂದೂ ಜನಜಾಗೃತಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೇಸರಿಯನ್ನು ಜೆಡಿಎಸ್ ದ್ವೇಷಿಸುತ್ತದೆ ಎಂಬ ಭಾವನೆಯನ್ನು ತೆಗೆಯಿರಿ: ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಎಸ್ ಶೆಟ್ಟಿ ಕಿಡಿ ಬಿಜೆಪಿ ಬೇರೆ, ಕೇಸರಿಯೇ ಬೇರೆ ಕೇಸರಿ ಹಿಂದೂಗಳ ಸಂಕೇತ



ಶಾರದಾ ಶರನ್ನವರಾತ್ರಿ ಮಹೋತ್ಸವ: ರಾಜರಾಜೇಶ್ವರಿ ಅಲಂಕಾರದಲ್ಲಿ ಭಕ್ತರನ್ನು ಅನುಗ್ರಹಿಸುತ್ತಿರುವ ದೇವಿ ಶಾರದೆ

ಶೃಂಗೇರಿ: ಶೃಂಗೇರಿಯಲ್ಲಿ ಅದ್ಧೂರಿಯಾಗಿ ಶಾರದಾ ಶರನ್ನವರಾತ್ರಿ ಉತ್ಸವ ಜರುಗುತ್ತಿದ್ದು, ಇಂದು ಜಗನ್ಮಾತೆ ಶಾರದಾದೇವಿಯು ರಾಜರಾಜೇಶ್ವರಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು ಭಕ್ತರನ್ನು ಅನುಗ್ರಹಿಸುತ್ತಿದ್ದಾಳೆ.

ನವರಾತ್ರಿಯ 9 ದಿನಗಳಲ್ಲಿ 9 ಅಲಂಕಾರಗಳಿಂದ ಕಂಗೊಳಿಸುವ ಮಾತೆಯು ಇಂದು ವಿಶೇಷವಾಗಿ ರಾಜರಾಜೇಶ್ವರಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಪಾಷ, ಅಂಕುಶ, ಪುಷ್ಪ ಬಾಣಗಳನ್ನು ಧರಿಸಿರುವ ಮಾತೆಯು ಲಕ್ಷ್ಮೀ, ಸರಸ್ವತಿಯರಿಂದ ಚಾಮರ ಸೇವೆಯನ್ನು ಪಡೆಯುತ್ತಿದ್ದಾಳೆ.


ದೇವಿಯ ಪದತಲದಲ್ಲಿ ಕನ್ನಡಿ ಇರುವುದು ಸ್ವಚ್ಛಂದ ಮನಸ್ಸನ್ನು ಬಿಂಬಿಸುವಂಥದ್ದು ಹಾಗೂ ಈ ಅಲಂಕಾರದ ವೈಶಿಷ್ಟ್ಯವೇ ಆಗಿದೆ. 

ಶೃಂಗೇರಿಗೆ ಸುತ್ತಮುತ್ತಲಿನ ಊರುಗಳಿಂದ ರಾಜ್ಯದ ಹಲವೆಡೆಗಳಿಂದ ಜನರು ಆಗಮಿಸುತ್ತಿದ್ದು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಾಗೂ ಶೃಂಗೇರಿಯ ಗಾಂಧಿ ಮೈದಾನದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಅನೇಕ ಸಂಖ್ಯೆಯಲ್ಲಿ ಮಠಕ್ಕೆ ಆಗಮಿಸುವ ಭಕ್ತರು ದೇವಿ ಹಾಗೂ ಜಗದ್ಗುರುಗಳ ದರ್ಶನ ಪಡೆದು ಶ್ರೀ ಮಠದ ಭೋಜನ ಶಾಲೆಯಲ್ಲಿ ಪ್ರಸಾದ ಸ್ವೀಕರಿಸಿ ಇಲ್ಲಿನ ಪ್ರವಾಸಿತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. 

ಒಟ್ಟಾರೆ ಶೃಂಗೇರಿಯಲ್ಲಿ ಕೊರೋನಾ ನಂತರದ ಅವಧಿಯ ನವರಾತ್ರಿ ಉತ್ಸವ ಅತ್ಯಂತ ಅದ್ಧೂರಿಯಾಗಿ ನಡೆಯುತ್ತಿದ್ದು, ಹಬ್ಬದ ವಾತಾವರಣವೇ ನಿರ್ಮಾಣವಾಗಿದೆ. ವಿದ್ಯುತ್ ದೀಪಾಲಂಕಾರಗಳಿಂದ ಇಡೀ ಪಟ್ಟಣವು ಶೃಂಗಾರಗೊಂಡಿದ್ದು, ರಾತ್ರಿಯ ವೇಳೆ ರಾಜಗೋಪುರದ ದೀಪಾಲಂಕಾರವು ಆಕರ್ಷಣೀಯವಾಗಿ ಕಾಣಿಸುತ್ತದೆ.