ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದು, ಆತನದು ಸಾವಲ್ಲ ಕೊಲೆ ಎಂಬುದಾಗಿ ಆರೋಪಿಸಿ ಮೃತನ ಕುಟುಂಬಸ್ಥರು ಪ್ರತಿಭಟನೆ ನಡೆಸಿರುವ ಘಟನೆ ವರದಿಯಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಈ ಘಟನೆ ನಡೆದಿದ್ದು, ಯುವಕನ ಸಂಬಂಧಿಕರು ಕೊಲೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದ, ಅನ್ವರ್ ಕಾಲೋನಿಯ ಜಮೀರ್(19) ಮೃತ ಯುವಕ ಎಂದು ಗುರುತಿಸಲಾಗಿದೆ.
ಜಮೀರ್ ಇತ್ತೀಚಿಗೆ ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕೆಲಸಕ್ಕೆ ಸೇರಿದ್ದ. ಈತ ಟಿವಿ ರಿಪೇರಿಗೆಂದು ದೇವರನರಸೀಪುರಕ್ಕೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದನು. ಜಮೀರ್ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈತನ ಮೊಮೊಬೈಲ ಫೋನ್ ಸ್ವಿಚ್ ಆಫ್ ಆಗಿತ್ತು.
ಈ ಹಿನ್ನೆಲೆ ಆತನ ಪೋಷಕರು ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದು, ಈತನ ಪೋಷಕರು ಕೊಲೆ ಎಂದು ಆರೋಪಿಸಿದ್ದಾರೆ. ಜಮೀರ್ ಮುಖದ ಮೇಲೆ ಗಾಯಗಳಾಗಿದ್ದು, ಇದು ಕೊಲೆ ಎಂದು ಜಮೀರ್ ಸಂಬಂಧಿಗಳು ಹಾಗೂ ಸ್ನೇಹಿತರು ಯುವಕನ ಶವವನ್ನು ಭದ್ರಾವತಿಯ ಹಾಲಪ್ಪ ವೃತ್ತದಲ್ಲಿಟ್ಟು ಪ್ರತಿಭಟನೆ ನಡೆಸಿದರು.
ಜೊತೆಗೆ ಹೊಸಮನೆ ಪೊಲೀಸ್ ಠಾಣೆ ಮುಂದೆಯೂ ಪ್ರತಿಭಟನೆ ನಡೆಸಿದರು. ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗೆಗಾಗಿ ಶಿವಮೊಗ್ಗಕ್ಕೆ ಕಳುಹಿಸಿರುವ ಪೊಲೀಸರು ತನಿಖೆಯ ಮುಂದಿನ ಹಂತವನ್ನು ಆರಂಭಿಸಿದ್ದಾರೆ.
ಒಟ್ಟಾರೆ ಯುವಕನ ಸಾವಿನ ಸುತ್ತ ಅನುಮಾನಗಳು ವ್ಯಕ್ತವಾಗಿದ್ದು, ಪೊಲೀಸರ ಸಂಪೂರ್ಣ ತನಿಖೆಯ ನಂತರವಷ್ಟೇ ಈ ಕುರಿತಾದ ಹೆಚ್ಚಿನ ಮಾಹಿತಿಗಳು ಲಭ್ಯವಾಗಲಿದೆ.









0 Comments