ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಇಂದು ಮತ್ತೆ ಇಂದಿರಾಗಾಂಧಿ ಅವರಿಗೆ ರಾಜಕೀಯವಾಗಿ ಪುನರ್ ಜನ್ಮನೀಡಿದ ಕಾಫಿನಾಡು ಚಿಕ್ಕಮಗಳೂರಿನ ಕುರಿತು ಮಾತನಾಡಿದ್ದಾರೆ ಹಾಗೂ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು 1000 ಕಿಮೀ ಪೂರೈಸಿದ್ದು ಈ ವೇಳೆ ಅನೇಕ ನಾಯಕರು ಹಾಗೂ ಕಾಂಗ್ರೆಸ್ ಮುಖಂಡರುಗಳು ಬಳ್ಳಾರಿಯಲ್ಲಿ ಉಪಸ್ಥಿತರಿದ್ದು ಬಿಜೆಪಿ ವಿರುದ್ಧ ಕಿಡಿಕಾರಿದರು. 

ಕಾರ್ಯಕ್ರಮದಲ್ಲಿ ರಾಜಸ್ಥಾನದ ಸಿ.ಎಂ ಅಶೋಕ್​ ಗೆಹ್ಲೋಟ್ ಮಾತನಾಡಿ ಇಂದಿರಾ ಗಾಂಧಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದರು. ಇಂದು ಯಾತ್ರೆ 1,000 ಕಿಲೋ ಮೀಟರ್​ ಪೂರ್ಣಗೊಂಡಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಚಿಕ್ಕಮಗಳೂರಿನಲ್ಲಿ ಇಂದಿರಾ ಗಾಂಧಿ ಚುನಾವಣೆಗೆ ಸ್ಪರ್ಧಿಸಿದ್ರು. ಆಗ ನಾವೆಲ್ಲಾ ಪ್ರಚಾರಕ್ಕಾಗಿ ಚಿಕ್ಕಮಗಳೂರಿಗೆ ಬಂದಿದ್ದೆವು. ಅಭೂತಪೂರ್ವ ಮತಗಳಿಂದ ಅವರನ್ನು ಗೆಲ್ಲಿಸಿ ಕಳಿಸಿದ್ದೀರಿ ಎಂದು ಇಂದಿರಾ ಗಾಂಧಿ ಅವರ ಚುನಾವಣೆ ಸಂದರ್ಭವನ್ನು ನೆನಪಿಸಿಕೊಂಡರು. ದೇಶದಲ್ಲಿ ಇಂದು ಸಂವಿಧಾನವನ್ನು ಲೇವಡಿ ಮಾಡಲಾಗುತ್ತಿದೆ. ಸಮಾಜದಲ್ಲಿ ಜಾತಿಯ ವಿಷಬೀಜಗಳನ್ನು ಬಿತ್ತಲಾಗುತ್ತಿದೆ. ಇದನ್ನೆಲ್ಲವೂ ಕಿತ್ತಿ ಒಗೆಯೋದಕ್ಕೆ ಜೋಡೋ ಪಾದಯಾತ್ರೆ ನಡೆದಿದೆ. ದೇಶದಲ್ಲಿ ಹಿಂಸೆಯ ವಾತಾವರಣ ಇದೆ. ಈ ದೇಶದಲ್ಲಿ ಭಾತೃತ್ವದ ವಾತಾವರಣ ನಿರ್ಮಾಣ ಆಗಬೇಕು. ಇಂದಿರಾ ಗಾಂಧಿಯವರು ದೇಶಕ್ಕಾಗಿ ಪ್ರಾಣ ಕೊಟ್ಟರು. ಮುಂದಿನ ದಿನ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.


1000 ಕಿಮೀ ಪೂರೈಸಿದ ಯಾತ್ರೆ: 

ಇಂದು 1 ಸಾವಿರ ಕಿಲೋಮೀಟರ್​​ ಪೂರ್ಣಗೊಳಿಸಿದ್ದೇವೆ. ಕಳೆದ 2 ವರ್ಷದಿಂದ ಸಹಕರಿಸಿದ ಎಲ್ಲರಿಗೂ ನಮಸ್ಕಾರಗಳು. ಯಾತ್ರೆಗೆ ಸೋನಿಯಾ ಗಾಂಧಿ ಬಂದು ದಸರಾ ಆಚರಿಸಿದ್ದಾರೆ. ಸೋನಿಯಾ ಗಾಂಧಿ ಭಾಗಿಯಾಗಿ ನಮಗೆಲ್ಲ ಶಕ್ತಿ ನೀಡಿದ್ದಾರೆ. ಅದೊಂದು ಐತಿಹಾಸಿಕ ಹೆಜ್ಜೆ. ನಮ್ಮ ರಾಜ್ಯದ ಪಾಲಿಗೆ ಇದೊಂದು ಸುವರ್ಣ ಅವಕಾಶ. ಈ ಯಾತ್ರೆ 150 ಸ್ಥಾನಗಳನ್ನ ಗೆಲ್ಲಲು ನೆರವಾಗುತ್ತೆ. ಈ ಪಾದಯಾತ್ರೆ ಖರ್ಗೆ, ಡಿಕೆಶಿ ಸಿಎಂ ಆಗುವುದಕ್ಕೆ ಅಲ್ಲ. ನಿಮ್ಮ ಹೆಜ್ಜೆ ದೇಶಕ್ಕೊಂದು ಕೊಡುಗೆ. ಈ ಹೆಜ್ಜೆ ರೈತರ ಬದುಕು, ಉದ್ಯೋಗದ ಸೃಷ್ಟಿಗೆ. ಬಿಜೆಪಿ ತೊಲಗಿಸಲು ನೀವು ಕಾರಣರಾಗಬೇಕು. ವಾಗ್ಧಾನ ನಮ್ಮದು ವಿಶ್ವಾಸ ನಿಮ್ಮದು ಎಂದು ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ಕೊಟ್ಟರು.

ನಮ್ಮ ಅಜ್ಜಿಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಕರ್ನಾಟಕ, ಚಿಕ್ಕಮಗಳೂರಿನ ಜನರು ಇಂದಿರಾ ಗಾಂಧಿಯವರನ್ನು ಗೆಲ್ಲಿಸಿದ್ರು. ನಮ್ಮ ತಾಯಿ ಸೋನಿಯಾರನ್ನು ಬಳ್ಳಾರಿ ಜನ ಗೆಲ್ಲಿಸಿದ್ರು. ಕರ್ನಾಟಕದ ಜನತೆಗೆ ನನ್ನ ಧನ್ಯವಾದಗಳು ಪಕ್ಷವನ್ನು ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರುವಲ್ಲಿ ರಾಹುಲ್ ಗಾಂಧಿ ಧನ್ಯವಾದ ತಿಳಿಸಿದರು.


ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಐದಾರು ದಿನ ಭಾರೀ ಮಳೆಯಾಗುವ ಮುನ್ಸೂಚನೆ :

ರಾಜ್ಯದಲ್ಲಿ ಮುಂದಿನ ಐದಾರು ದಿನಗಳು ಮಳೆಯಾಗುವ ಮುನ್ಸೂಚನೆಯಿದ್ದು, ನೈಋುತ್ಯ ಮುಂಗಾರು ಮಾರುತ ಮರಳುವಿಕೆ, ಅರಬ್ಬಿಸಮುದ್ರ, ಉತ್ತರ ಅಂಡಮಾನ್‌ ಸಮುದ್ರ ಭಾಗ ಮತ್ತು ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣ ಆಗಿರುವ ಮೇಲ್ಮೈ ಸುಳಿಗಾಳಿಗಳು ಮಳೆಯ ಅಬ್ಬರವನ್ನು ಹೆಚ್ಚಿಸಲಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಿಸಿದ್ದಾರೆ. 

ರಾಜ್ಯದ ಕೆಲವೆಡೆ ತುಂತುರು ಮಳೆ, ಇನ್ನು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಒಟ್ಟಾರೆ ಮುಂದಿನ ಕೆಲ ದಿನ ರಾಜ್ಯದಲ್ಲಿ ಮಳೆಯ ವಾತಾವರಣ ಇರಲಿದೆ. ಈಗಾಗಲೇ ರಾಜ್ಯದ ಮಲೆನಾಡು ಹಾಗೂ ಬಯಲುಸೀಮೆಯ ಕೆಲ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದು ಅಲ್ಲಲ್ಲಿ ಕೆಲ ಅವಘಡಗಳು ಮಳೆಯಿಂದಾಗಿ ಸಂಭವಿಸಿದೆ.



ಭಾನುವಾರ ಬೆಳಗ್ಗೆ 8.30 ರವರೆಗೆ ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಇರಲಿದೆ. ಭಾನುವಾರ ಬೆಳಗ್ಗೆಯಿಂದ ಸೋಮವಾರದ ತನಕ ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ. ಆ ಬಳಿಕವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಂಭವವಿದೆ. 

ಚಿಕ್ಕಮಗಳೂರು ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲ ಪ್ರದೇಶದಲ್ಲಿ ವಿಪರೀತವಾಗಿ ಮಳೆಯಾಗಿದ್ದು ಜನರು ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.