ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ ಹಕ್ಕಿಪಿಕ್ಕಿ ಜನರ ಕ್ಯಾಂಪ್ ಗಳ ತೆರವು ಕಾರ್ಯಾಚರಣೆಯನ್ನು ಇಂದು ಅಧಿಕಾರಿಗಳು ನಡೆಸಿದರು. ಶಿವಮೊಗ್ಗ ಜಿಲ್ಲೆಯ ಮಲ್ಲಿಗೆನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕ್ಯಾಂಪನ್ನು ಪೊಲೀಸರ ಸಹಾಯದಿಂದ ಅಧಿಕಾರಿಗಳು ತೆರವುಗೊಳಿಸಿದರು.
ಮಲ್ಲಿಗೆನಹಳ್ಳಿಯಲ್ಲಿ ಕರ್ನಾಟಕ ನೀರಾವರಿ ನಿಗಮಕ್ಕೆ ಸೇರಿದ್ದ ಜಾಗದಲ್ಲಿ ಹಕ್ಕಿಪಿಕ್ಕಿ ಜನರು ಅನಧಿಕೃತವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದರು. ಹೀಗಾಗಿ ಇಂದು ಪೊಲೀಸ್ ಬಂದೋಬಸ್ತ್ ನಲ್ಲಿ ಬಂದ ನೀರಾವರಿ ನಿಗಮದ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭಿಸಿದರು.
ಅಧಿಕಾರಿಗಳು ಜೆಸಿಬಿ ಮೂಲಕ ಮನೆ, ಕಾಪೌಂಡ್ ಕೆಡವುತ್ತಿದ್ದಂತೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಕಾರ್ಯಾಚರಣೆಗೆ ನಿವಾಸಿಗಳು ವಿರೋಧ ಮಾಡಿದರು. ಈ ವೇಳೆ ಅಡ್ಡಿಪಡಿಸಿದವರನ್ನು ಬಂಧಿಸಿದ ಪೊಲೀಸರು, ಕರೆದೊಯ್ದರು.
ಪಶುಗಳಿಗೆ ಚರ್ಮಗಂಟು ರೋಗ ವ್ಯಾಪಿಸುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಎರಡು ತಿಂಗಳು ಜಾನುವಾರುಗಳ ಸಂತೆ, ಜಾತ್ರೆ ಸಾಗಾಟಕ್ಕೆ ನಿಷೇಧ
ಚಿಕ್ಕಮಗಳೂರು: ರಾಜ್ಯಾದ್ಯಂತ ಜಾನುವಾರುಗಳಲ್ಲಿ ಚರ್ಮಗಂಟು ರೋಗವು ಹರಡುತ್ತಿದ್ದು, ಇದನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಅಂತೆಯೇ ನಿರ್ಬಂಧಗಳನ್ನು ವಿಧಿಸಿದೆ.
ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಜಾನುವಾರುಗಳಿಗೆ ಚರ್ಮಗಂಟುರೋಗ ಹರಡುತಲಿದ್ದು, ಈ ಸಂಬಂಧ ಜಾನುವಾರುಗಳಿಗೆ ಚಿಕಿತ್ಸೆ ಅಂತೆಯೇ ಲಸಿಕೆಯನ್ನು ಹಾಕಲಾಗುತ್ತಿದ್ದು ಈ ರೋಗವನ್ನು ತಡೆಗಟ್ಟುವ ಸಲುವಾಗಿ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಜರುಗಿಸುವುದು ಮತ್ತು ಜಾನುವಾರುಗಳ ಸಾಗಾಣಿಕೆಯನ್ನು ಎರಡು ತಿಂಗಳ ಕಾಲ ನಿಷೇಧಿಸಿ ಆದೇಶಿಸಿದ್ದಾರೆ.
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ಚಿಕ್ಕಮಗಳೂರು ಇವರು ವರದಿಯನ್ನು ಸಲ್ಲಿಸಿದ್ದಾರೆ, ಇವರ ಉಲ್ಲೇಖದಂತೆ ಸಲ್ಲಿಸಿರುವ ವರದಿಯನ್ನು ಆಧರಿಸಿ, ವರದಿಯಲ್ಲಿ ತಿಳಿಸಿರುವಂತೆ ಜಿಲ್ಲೆಯಲ್ಲಿ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟದಿದ್ದಲ್ಲಿ ಈ ರೋಗವು ವ್ಯಾಪಕವಾಗಿ ಹರಡಿ ಜಾನುವಾರುಗಳು ಮತ್ತು ಸಾರ್ವಜನಿಕರ ಪ್ರಾಣಕ್ಕೆ ಹಾನಿ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಜಾನುವಾರುಗಳು ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 15 ರ ವರೆಗೆ ಜಾನುವಾರುಗಳ ಸಂತೆ, ಜಾತ್ರೆ ನಡೆಸುವುದು ಜಾನುವಾರುಗಳ ಸಾಗಣೆ ನಡೆಸುವುದಕ್ಕೆ ನಿಷೇಧ ಹೇರಲಾಗಿದ್ದು, ಆದೇಶವನ್ನು ಉಲ್ಲಂಘನೆ ನಡೆಸುವವರ ವಿರುದ್ಧ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮವನ್ನು ಜರುಗಿಸುವುದಾಗಿ ತಿಳಿಸಿದ್ದಾರೆ.









0 Comments